ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ A.R.ರೆಹಮಾನ್​ಗೆ ವಿಶೇಷ ಗೌರವ


ಆಸ್ಕರ್​ ಪ್ರಶಸ್ತಿ ವಿಜೇತ ಎ. ಆರ್.​ ರೆಹಮಾನ್​ಗೆ ಮತ್ತೊಂದು ಗೌರವ ಸಿಕ್ಕಿದೆ. ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಹಿನ್ನೆಲೆ, 43 ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷವಾಗಿ ಗೌರವಿಸಲಾಗಿದೆ. ಭಾರದತದ ಪ್ರಸಿದ್ಧ ಸಂಗೀತ ನಿರ್ದೇಶಕ ಎ. ಆರ್​. ರೆಹಮಾನ್ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಹಾಲಿವುಡ್‌ನಲ್ಲಿ ಸಂಗೀತ ಸಂಯೋಜನೆ ಮಾಡಿ ಪ್ರಸಿದ್ಧಿ ಪಡೆದಿದ್ದಕ್ಕಾಗಿ, 43ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷವಾಗಿ ಸನ್ಮಾನಿಸಲಾಗಿದೆ. .

ಈ ವಿಚಾರವನ್ನು ರೆಹಮಾನ್​ ತಮ್ಮ ಇನ್​ಸ್ಟಾಗ್ರಂನಲ್ಲಿ ಹಂಚಿಕೊಂಡು ಸಂತಸ ವ್ಯಕ್ತ ಪಡಿಸಿದ್ದಾರೆ. ರೆಹಮಾನ್​ ಇಲ್ಲಿವರೆಗೆ 2 ಆಸ್ಕರ್​ ಅವಾರ್ಡ್, ಎರಡು ಗ್ರ್ಯಾಮಿ ಪ್ರಶಸ್ತಿಗಳನ್ನು ಮತ್ತು ಬೇರೆ ಬೇರೆ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇನ್ನು ರೆಹಮಾನ್​ ಸಂಗೀತ ಜೀವನ ಪ್ರಾರಂಭವಾಗಿದ್ದು, ಮಣಿರತ್ನಂ ನಿರ್ದೇಶನದ ತಮಿಳು ಚಲನಚಿತ್ರ ‘ರೋಜಾ’ ಚಿತ್ರದಿಂದ.

ನಂತರ ತಮಿಳು ಮತ್ತು ತೆಲುಗು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. 1995 ರಲ್ಲಿ ರಾಮ್ ಗೋಪಾಲ್ ವರ್ಮಾ ಅವರ ‘ರಂಗೀಲಾ’ ಚಿತ್ರದ ಮೂಲಕ ಬಾಲಿವುಡ್​ಗೂ ಎಂಟ್ರಿ ಕೊಟ್ಟ ರೆಹಮಾನ್​ ಅಲ್ಲಿಯೂ ತಮ್ಮ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *