ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗದಗದ ಹರ್ತಿ ಗ್ರಾಮದ ಬಳಿ ನಡೆದಿದೆ.

ಸ್ಥಳದಲ್ಲಿಯೇ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹರ್ತಿ ಗ್ರಾಮಸ್ಥರು ಜಿಮ್ಸ್​ಗೆ ದಾಖಲಿಸಿದ್ದಾರೆ. ಇನ್ನು ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮರದಡಿಯಲ್ಲಿಯೇ ಚಾಲಕ ಸಿಲುಕಿಕೊಂಡಿದ್ದ.

ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

The post ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಕಾರು ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ  appeared first on News First Kannada.

Source: newsfirstlive.com

Source link