ಮೈಸೂರು: ನಗರದ ಮಾತೃಮಂಡಳಿ ಶಾಲೆ ವೃತ್ತದಲ್ಲಿ ರಾತ್ರೋ ರಾತ್ರಿ ಸ್ಥಾಪನೆ ಮಾಡಿದ ಅಂಬೇಡ್ಕರ್ ಪ್ರತಿಮೆ ತೆರುವುಗೊಳಿಸಿದ ಹಿನ್ನಲೆ ಅಭಿಮಾನಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲಿಕೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಮಾತೃಮಂಡಳಿ ವೃತ್ತದಲ್ಲಿ ಉಧ್ವಿಘ್ನದ ಸ್ಥಿತಿ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನೂರಾರು ಪೊಲೀಸರನ್ನ ನಿಯೋಜಿಸಲಾಗಿದೆ.
ಹೂಟಗಳ್ಳಿ ನಿವಾಸಿ ಸತೀಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮಾಜಿ ಮೇಯರ್ ಪುರುಷೋತ್ತಮ್ ಸೇರಿದಂತೆ ಇನ್ನಿತರ ಮುಖಂಡರು ಆಗಮಿಸಿದ್ದಾರೆ. ಪ್ರತಿಮೆ ತೆರುವುಗೊಳಿಸಿದ ವಿಚಾರವಾಗಿ ಪೊಲೀಸರೊಂದಿಗೆ ಮಾತನ ಚಕಮಕಿ ನಡೆದಿದೆ. ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.