ನವದೆಹಲಿ: ಫೇಸ್‌ಬುಕ್ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್ಆ್ಯಪ್ ಅಕ್ಟೋಬರ್ನಲ್ಲಿ ಭಾರತದಲ್ಲಿ 20 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. ಸೆಪ್ಟೆಂಬರ್‌ನಲ್ಲಿ 2.2 ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಲಾಗಿತ್ತು.
ಮಾಹಿತಿ ತಂತ್ರಜ್ಞಾನ (ntermediary Guidelines and Digital Media Ethics Code) ನಿಯಮಗಳು 2021 ರ ಪ್ರಕಾರ WhatsApp ತನ್ನ ಮಾಸಿಕ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ 20 ಲಕ್ಷಕ್ಕೂ ಹೆಚ್ಚು ವಾಟ್ಸ್ಆ್ಯಪ್ ಬ್ಯಾನ್ ಮಾಡಲಾಗಿದೆ ಎಂದು ತಿಳಿಸಿದೆ.
ಅಕ್ಟೋಬರ್ 1 ರಿಂದ ಅಕ್ಟೋಬರ್ 31ರ ನಡುವೆ ಎರಡು ದಶಲಕ್ಷಕ್ಕೂ ಹೆಚ್ಚು WhatsApp ಖಾತೆಗಳನ್ನು ನಿಷೇಧಿಸಲಾಗಿದೆ. ವಾಟ್ಸ್ಆ್ಯಪ್ ಪ್ಲಾಟ್‌ಫಾರ್ಮ್‌ನಲ್ಲಿನ ಸಂದೇಶಗಳು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಆಗಿವೆ. ಆದರೆ ಇದು ಬಳಕೆದಾರರ ವರದಿಗಳು, ಪ್ರೊಫೈಲ್ ಫೋಟೋಗಳು, ಗುಂಪು ಫೋಟೋಗಳು ಸೇರಿದಂತೆ ಲಭ್ಯವಿರುವ ಎನ್‌ಕ್ರಿಪ್ಟ್ ಮಾಡದ ಮಾಹಿತಿಯನ್ನು ಅವಲಂಬಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.
WhatsApp ಸುಮಾರು 248 ನಿಷೇಧದ ಮೇಲ್ಮನವಿಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 18 ಖಾತೆಗಳ ವಿರುದ್ಧ ಕ್ರಮ ಕೈಗೊಂಡಿದೆ ಎಂದು ವರದಿ ತಿಳಿಸಿದೆ. ಸದ್ಯ ವಾಟ್ಸಪ್ ತನ್ನ ಅತಿದೊಡ್ಡ ಮಾರುಕಟ್ಟೆಯಾದ ಭಾರತದಲ್ಲಿ 487 ಮಿಲಿಯನ್ ಬಳಕೆದಾರರನ್ನು ಹೊಂದಿದೆ.