ಬೆಂಗಳೂರು: ಅಕ್ರಮವಾಗಿ ಕೋವಿಡ್ ವ್ಯಾಕ್ಸಿನ್ ಮಾರಾಟ ಮಾಡಿದ ಆರೋಪದ ಮೇಲೆ ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು, ಓರ್ವ ವೈದ್ಯೆ ಸೇರಿ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.

ಪುಷ್ಪಿತಾ (25) ಹಾಗೂ ಪ್ರೇಮಾ (34) ಬಂಧಿತ ಆರೋಪಿಗಳು. ಪುಷ್ಪಿತಾ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ. ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುಷ್ಪಿತಾ, ಲಸಿಕೆಯನ್ನ ಕದ್ದು ಅನ್ನಪೂರ್ಣೇಶ್ವರಿ ನಗರದ ಪ್ರೇಮ ಮನೆಯಲ್ಲಿ ದಾಸ್ತಾನು ಮಾಡಿಸುತ್ತಿದ್ದಳು ಅನ್ನೋ ಆರೋಪ ಕೇಳಿಬಂದಿದೆ.

ಇಲ್ಲಿ ಪ್ರೇಮ ತಾನು ಕರೆಸಿದ ವ್ಯಕ್ತಿಗಳಿಂದ ಹಣ ಪಡೆದು ಅಕ್ರಮವಾಗಿ ವ್ಯಾಕ್ಸಿನೇಷನ್‌ ನೀಡಲಾಗುತ್ತಿತ್ತು. ಏ.23 ರಿಂದ ತಲಾ 500 ರೂಪಾಯಿ ಪಡೆದು ವ್ಯಾಕ್ಸಿನ್ ನೀಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ವ್ಯಾಕ್ಸಿನ್ ಪಡೆಯುವ ನೆಪದಲ್ಲಿ ತೆರಳಿದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ರೆಡ್ ಹ್ಯಾಂಡಾಗಿ ಆರೋಪಿಗಳನ್ನ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 1 ವ್ಯಾಕ್ಸಿನ್ ಕ್ಯಾರಿಯರ್, ಬಳಸಿದ ಹಾಗೂ ಬಳಸದ ಸಿರೀಂಜಸ್​ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

The post ಅಕ್ರಮವಾಗಿ ಕೊರೊನಾ ವ್ಯಾಕ್ಸಿನ್ ಮಾರಾಟ.. ವೈದ್ಯೆ ಸೇರಿ ಇಬ್ಬರ ಬಂಧನ appeared first on News First Kannada.

Source: newsfirstlive.com

Source link