ವಿಜಯಪುರ: ಅಕ್ರಮವಾಗಿ ಗಾಂಜಾ ಬೆಳದಿದ್ದ ಜಮೀನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದ ಜಮೀನಿನಲ್ಲಿ ಘಟನೆ ನಡೆದಿದ್ದು, ಜಮೀನಿನ ಮಾಲೀಕನನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ವಿಜಯಪುರ ಗ್ರಾಮೀಣ ಪೊಲೀಸರು ದಾಳಿ ಮಾಡಿ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಮಂಜುನಾಥ ಪಾಟೀಲ್ ಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗಿತ್ತು.

ಜಮೀನು ಮಾಲೀಕ ಮಂಜುನಾಥ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ. 50 ಕೆ.ಜಿ. ಹಸಿ ಗಾಂಜಾ ವಶಕ್ಕೆ ಪಡೆದಿದ್ದು, ಅಂದಾಜು 1 ಲಕ್ಷ ರೂ. ಮೌಲ್ಯದ್ದಾಗಿರಬುಹುದೆಂದು ಅಂದಾಜಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಅಕ್ರಮವಾಗಿ ಬೆಳೆದಿದ್ದ 50 ಕೆ.ಜಿ.ಗಾಂಜಾ ವಶ- ಜಮೀನು ಮಾಲೀಕನ ಬಂಧನ appeared first on Public TV.

Source: publictv.in

Source link