ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಕೆಆರ್​​​​ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದೆ, ಈ ಬಗ್ಗೆ ಸಂಸತ್ತಿನಲ್ಲಿ ಮಾತಾಡಲು ಅವಕಾಶ ನೀಡುವಂತೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಅವರಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮನವಿ ಸಲ್ಲಿಸಿದ್ದಾರೆ.

ಕಳೆದ ಕೆಲದಿನಗಳಿಂದ ಕೆಆರ್​​​​ಎಸ್ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸುಮಲತಾ ನಡುವೆ ರಾಜಕೀಯ ಜಟಾಪಟಿ ನಡೆಯುತ್ತಿದೆ. ಈ ಬೆನ್ನಲ್ಲೆ ಸ್ಪೀಕರ್​ಗೆ ಮನವಿ ಸಲ್ಲಿಸಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೆ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಸುಮಲತಾ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಕೂಡ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಂಬಾಡಿ ತನ್ನನ್ನು ಕಾಪಾಡುವಂತೆ ಕೂಗಿ ಹೇಳುತ್ತಿದೆ; ಮಂಡ್ಯ ಸಂಸದೆ ಸುಮಲತಾ

The post ಅಕ್ರಮ ಗಣಿಗಾರಿಕೆ ಕುರಿತು ಸಂಸತ್ತಿನಲ್ಲಿ ಮಾತಾಡಲು ಅವಕಾಶ ಕೇಳಿದ ಸುಮಲತಾ appeared first on News First Kannada.

Source: newsfirstlive.com

Source link