ಅಕ್ರಮ ಗಣಿಗಾರಿಕೆ ವಿರುದ್ಧ ಸುಮಲತಾ ಯುದ್ಧ; ಇಂದು ರಾಜ್ಯಪಾಲರ ಭೇಟಿ ಮಾಡಿದ ಸಂಸದೆ

ಅಕ್ರಮ ಗಣಿಗಾರಿಕೆ ವಿರುದ್ಧ ಸುಮಲತಾ ಯುದ್ಧ; ಇಂದು ರಾಜ್ಯಪಾಲರ ಭೇಟಿ ಮಾಡಿದ ಸಂಸದೆ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಭೇಟಿ ಮಾಡಿ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಸುಮಲತಾ ಅವರು, ರಾಜ್ಯಪಾಲರು ಹೊಸದಾಗಿ ಬಂದಿದ್ದಾರೆ. ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದೇನೆ. ಇದೇ ವೇಳೆ ರಾಜ್ಯಪಾಲರ ಬಳಿ ಅಕ್ರಮ ಗಣಿಗಾರಿಕೆ ಬಗ್ಗೆ ಮನವಿ ಮಾಡಿದ್ದು, ಕೆಲವು ಸಲಹೆಗಳನ್ನು ರಾಜ್ಯಪಾಲರು ಕೊಟ್ಟಿದ್ದಾರೆ. ಅಕ್ರಮ ಗಣಿಗಾರಿಕೆಯ ಪರಿಣಾಮಗಳ ಬಗ್ಗೆ ತಿಳಿಸಿ, ಮೆಮೋರಾಂಡಮ್ ಕೊಟ್ಟಿದ್ದೇನೆ. ಸರ್ಕಾರಕ್ಕೆ ಮಾಹಿತಿ ತಿಳಿಸೋದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯಪಾಲ ಗೆಹ್ಲೋತ್ ಅವರ ರಾಜಕೀಯ ಹಿನ್ನೆಲೆ ಇಲ್ಲಿದೆ..

ಇದೇ ವೇಳೆ ನಟ ದರ್ಶನ್, ನಿರ್ಮಾಪಕ ಉಮಾಪತಿ ನಡುವೆ ಆಸ್ತಿ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಪ್ರಕರಣದ ಬಗ್ಗೆ ನಾನು ಮಾತಾಡೋಕೆ ಇಷ್ಟಪಡುವುದಿಲ್ಲ. ನಾನು ಅನಾವಶ್ಯಕ ಹೇಳಿಕೆ ಕೊಡುವುದು ಸರಿಯಲ್ಲ. ಹೊಟೇಲ್‌ನಲ್ಲಿ ನಡೆದ ಹಲ್ಲೆ ಬಗ್ಗೆ ತನಿಖೆ ನಡೆಯುತ್ತಿದೆ. ಸತ್ಯಾಂಶ ಹೊರಗೆ ಬರಲಿ. ಹಲ್ಲೆ ಪ್ರಕರಣ ಬಗ್ಗೆ ಗೊತ್ತಿಲ್ಲ. ಸಂಸದೆಯಾಗಿ ನಾನು ನನ್ನ ಕೆಲಸದ ಕಡೆ ಗಮನ ಕೊಟ್ಟಿದೀನಿ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಪಾಲರಾಗಿ ಪ್ರಮಾಣವಚನ; ಕನ್ನಡದಲ್ಲೇ ಟ್ವೀಟ್ ಮಾಡಿದ ಥಾವರ್​ಚಂದ್ ಗೆಹ್ಲೋತ್

The post ಅಕ್ರಮ ಗಣಿಗಾರಿಕೆ ವಿರುದ್ಧ ಸುಮಲತಾ ಯುದ್ಧ; ಇಂದು ರಾಜ್ಯಪಾಲರ ಭೇಟಿ ಮಾಡಿದ ಸಂಸದೆ appeared first on News First Kannada.

Source: newsfirstlive.com

Source link