ಮಂಡ್ಯ: ಮಡ್ಯ ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಮರುಜೀವ ಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳಾದ ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್ ಪುಟ್ಟರಾಜು, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಶ್ರೀನಿವಾಸ್, ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ ಸೇರಿದಂತೆ 24 ಜನರಿಗೆ ಸಿಬಿಐ ವಿಶೇಷ ನ್ಯಾಯಲಯ ಸಮನ್ಸ್ ಜಾರಿಗೊಳಿಸಿದೆ.

24 ಮಂದಿ ಆರೋಪಿಗಳಿಗೆ ಸಮನ್ಸ್​ ಜಾರಿಗೊಳಿಸಿರುವ ಸಿಬಿಐ ವಿಶೇಷ ನ್ಯಾಯಲಯ, ಜುಲೈ 20ನೇ ತಾರೀಕಿನಂದು ಪ್ರಕರಣದ ವಿಚಾರಣೆಗಾಗಿ ಹಾಜರಾಗುವಂತೆ ಆದೇಶಿಸಿದೆ. ಅಕ್ರಮ ಗಣಿಗಾರಿಕೆ ಕೇಸ್​​ ಭಾರೀ ಸದ್ದು ಮಾಡುತ್ತಿರುವ ಹೊತ್ತಲ್ಲೇ ಮತ್ತೊಂದು ಕಂಟಕ ಎದುರಾಗಿರುವುದು ಜೆಡಿಎಸ್​​ ನಾಯಕರಿಗೆ ಭಾರೀ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: ಶಾಸಕ ಪುಟ್ಟರಾಜುಗೆ ಸೇರಿದ ಕಲ್ಲುಕ್ವಾರಿಗೆ ಸುಮಲತಾ ಭೇಟಿ; ಹೈಡ್ರಾಮಾ

ಇನ್ನು, 2009ರಲ್ಲಿ ಮಡ್ಯ ನಗರಾಭಿವೃದ್ಧಿ ಪ್ರಾಧಿಕಾರದ107 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಶಾಸಕ ಸಿ.ಎಸ್​ ಪುಟ್ಟರಾಜು ಸೇರಿದಂತೆ ಹಲವರ ವಿರುದ್ಧ ಕೇಳಿ ಬಂದಿತ್ತು. ಈ ಸಂಬಂಧ ಅಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ಸಿಬಿಐ ಸಾರ್ವಜನಿಕರಿಗೆ ಮನವಿ ಮಾಡಿದ್ದರು. ಬಳಿಕ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸಿಬಿಐ ಅಧಿಕಾರಿಗಳೇ ಖುದ್ದು ಕೇಸು ದಾಖಲಿಸಿಕೊಂಡು 24 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧಪಡಿಸಿದ್ದರು.

The post ಅಕ್ರಮ ಸೈಟುಗಳ ಹಂಚಿಕೆ ಕೇಸ್​​; ಜೆಡಿಎಸ್​​ ನಾಯಕರಿಗೆ ಮತ್ತೊಂದು ಕಂಟಕ, ಕೋರ್ಟ್​ನಿಂದ ಸಮನ್ಸ್​ appeared first on News First Kannada.

Source: newsfirstlive.com

Source link