ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪರ್ಯಾಯ ಮಾರ್ಕೆಟ್ ಗಳನ್ನು ಜಿಲ್ಲಾಡಳಿತ ತೆರೆದಿದೆ. ಆದರೂ ಜನ ಸಾಮಾಜಿ ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಈ ಹಿಂದೆ ನಡೆಯುತ್ತಿದ್ದ ಮಾರುಕಟ್ಟೆಗಳ ಸ್ಥಳ ಬದಲಿಸಿ ಬೇರೆಡೆ ವಿಶಾಲ ಪ್ರದೇಶದಲ್ಲಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಮಡಿಕೇರಿ ನಗರದ ಸರ್ಕಾರಿ ಬಸ್ ನಿಲ್ದಾಣ ಮತ್ತು ಎಪಿಎಂಸಿ ಆವರಣದಲ್ಲಿ ಅಂಗಡಿಗಳನ್ನು ತೆರೆಯಲಾಗಿದೆ. ನೂಕು ನುಗ್ಗಲು ಸಂಭವಿಸದಂತೆ ಪ್ರತ್ಯೇಕ ಎರಡು ಕಡೆಗಳಲ್ಲಿ ಅಂಗಡಿಗಳನ್ನು ತೆರೆಯಲಾಗಿದೆ.

ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ 12 ಗಂಟೆಯ ವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಸಾಮಾಜಿಕ ಅಂತರ ಕಾಪಾಡಲು ಅಂಗಡಿಗಳ ಮುಂದೆ ಮಾರ್ಕ್ ಗಳನ್ನು ಸಹ ಹಾಕಲಾಗಿದೆ. ಮೂರಡಿ ಅಂತರಕ್ಕೆ ಒಂದು ಅಂಗಡಿ ತೆರೆಯಲು ಅವಕಾಶ ಮಾಡಿದ್ದರೂ ಜನಗಳು ಮಾತ್ರ ಅಂತರ ಕಾಯ್ದುಕೊಳ್ಳದೆ ತರಕಾರಿಗಳ ವ್ಯಾಪಾರ ಮಾಡುತ್ತಿದ್ದಾರೆ.

ನಗರಸಭೆ ಸಿಬ್ಬಂದಿ ಜನರಿಗೆ ಎಚ್ಚರಿಸುತ್ತಿದ್ದರೂ ಅರಿತುಕೊಳ್ಳದೆ ಅಗತ್ಯ ವಸ್ತುಗಳಿಗೆ ಮುಗಿಬೀಳುತ್ತಿದ್ದಾರೆ. ಅಷ್ಟೆ ಅಲ್ಲದೇ ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದರೂ ಜನ ಮಾತ್ರ ಯಾವುದೇ ರಸ್ತೆಗೆ ಇಳಿದು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಗತ್ಯವಸ್ತುಗಳನ್ನು ಖರೀದಿಸುತ್ತಿದ್ದಾರೆ.

The post ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ- ಟ್ರಾಫಿಕ್ ಜಾಮ್, ಸಾಮಾಜಿಕ ಅಂತರ ಮಾಯ appeared first on Public TV.

Source: publictv.in

Source link