ಸೌತ್ ಆಫ್ರಿಕಾ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಭಾರತ, ಟೆಸ್ಟ್ ಱಂಕಿಂಗ್ನಿಂದ ಅಗ್ರಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಆ್ಯಷಸ್ ಟೆಸ್ಟ್ ಸರಣಿ ಗೆದ್ದ ಆಸ್ಟ್ರೇಲಿಯಾ, ಟೆಸ್ಟ್ ಱಂಕಿಂಗ್ನಲ್ಲಿ ಅಗ್ರ ಸ್ಥಾನಕ್ಕೇರಿದೆ.
ಭಾರತ ವಿರುದ್ಧ ಸರಣಿ ಗೆದ್ದ ದಕ್ಷಿಣ ಆಫ್ರಿಕಾ ತಂಡ ಐದನೇ ಸ್ಥಾನಕ್ಕೇರಿದೆ. ಪಾಕಿಸ್ತಾನ ತಂಡ ಆರನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ತಂಡ ಎರಡನೇ ಸ್ಥಾನದಲ್ಲಿ ಉಳಿದಿದ್ದರೆ, ಶ್ರೀಲಂಕಾ, ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಜಿಂಬಾಬ್ವೆ, ಅಫಘಾನಿಸ್ತಾನ ಕ್ರಮವಾಗಿ 7, 8, 9, 10 ಮತ್ತು 11 ರಲ್ಲಿಯೇ ಉಳಿದಿವೆ.