ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಗೆ ಸಾಮಾನ್ಯ ಜನರೂ ಸೇರಿದಂತೆ ಹಲವಾರು ಮಂದಿ ಸೆಲೆಬ್ರಿಟಿಗಳು ಕೂಡ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂತೆಯೇ ಇದೀಗ ಡಾ. ರಾಜ್ ಕುಮಾರ್ ಅವರ ಯೋಗ ಗುರು ಕೂಡ ಕೋವಿಡ್ 19 ನಿಂದ ಮೃತಪಟ್ಟಿದ್ದಾರೆ.

ಹೊನ್ನಪ್ಪ ಫಕೀರಪ್ಪ ನಾಯ್ಕರ್(90) ಅವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಸಂಬಂಧ ಅವರಿಗೆ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಕನಕಪುರದ ಬಳಿ ನಾಗದೇವನಹಳ್ಳಿಯಲ್ಲಿ ಹೊನ್ನಪ್ಪ ನಾಯ್ಕರ್ ಅವರ ಅಂತಿಮ ಸಂಸ್ಕಾರ ನೆರವೇರಿದೆ.

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೊನ್ನಪ್ಪ ನಾಯ್ಕರ್ ನಂತರ ಯೋಗದತ್ತ ಮುಖ ಮಾಡಿದರು. ಡಾ. ರಾಜಕುಮಾರ್ ಅವರ ಕುಟುಂಬ ಸೇರಿದಂತೆ ಹಲವು ಗಣ್ಯರಿಗೆ ಯೋಗ ಹೇಳಿಕೊಡುತ್ತಿದ್ದರು.

ಈ ಹಿಂದೆ ಶಂಖನಾದ ಅರವಿಂದ್, ರೇಣುಕಾ ಶರ್ಮಾ, ರಾಮು, ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ರಾಜಾರಾಂ, ಕನ್ನಡ ಸಿನಿಮಾದ ನಿರ್ಮಾಪಕ ಹಾಗೂ ವಿತರಕ ದೀಪಕ್ ಸಾಮಿದೊರೈ ಸೇರಿದಂತೆ ಹಲವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

The post ಅಣ್ಣಾವ್ರ ಯೋಗ ಗುರು ಹೊನ್ನಪ್ಪ ಫಕೀರಪ್ಪ ನಾಯ್ಕರ್ ಇನ್ನಿಲ್ಲ appeared first on Public TV.

Source: publictv.in

Source link