ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ | Karnataka Government order to continue Guest Lecturers Service

ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಕಳೆದ ಸಾಲಿನಲ್ಲಿ ಬೇರೆ ಬೇರೆ ವಿಶ್ವ ವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ನಿರ್ಧಾರ ಮಾಡಲಾಗಿದೆ. 2021- 22ನೇ ಸಾಲಿಗೂ‌ ಸೇವೆ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಸೂಚನೆ; ಸಿಎಂಗೆ ಪತ್ರ ಬರೆದ ಬಸವರಾಜ ಹೊರಟ್ಟಿ

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹಣ ಕಬಳಿಸಿದ ಪ್ರಾಂಶುಪಾಲ; FIR ದಾಖಲು

TV9 Kannada

Leave a comment

Your email address will not be published. Required fields are marked *