ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು ಬಿಪಿನ್ ರಾವತ್; ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಸಾವಿಗೆ ಸಂತಾಪ ವ್ಯಕ್ತಪಡಿಸಿದ ಮೋದಿ | PM Narendra Modi Modi extends condolences to the families of CDS General Bipin Rawat


ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು ಬಿಪಿನ್ ರಾವತ್; ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಸಾವಿಗೆ ಸಂತಾಪ ವ್ಯಕ್ತಪಡಿಸಿದ ಮೋದಿ

ಬಿಪಿನ್ ರಾವತ್ ಜತೆ ನರೇಂದ್ರ ಮೋದಿ

ದೆಹಲಿ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರ್ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಜನರಲ್ ಬಿಪಿನ್ ರಾವತ್ (Bipin Rawat) ಮತ್ತು ಅವರ ಪತ್ನಿ ಮಧುಲಿಕಾ ಮತ್ತು ಇತರ 11 ಮಂದಿ ಸಾವಿಗೀಡಾಗಿದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ (helicopter crash) ನಾವು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಅವರು ಅತ್ಯಂತ ಶ್ರದ್ಧೆಯಿಂದ ಭಾರತಕ್ಕೆ ಸೇವೆ ಸಲ್ಲಿಸಿದರು. ನನ್ನ ಪ್ರಾರ್ಥನೆ ದುಃಖಿತ ಕುಟುಂಬಗಳೊಂದಿಗೆ ಇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.  ಹೆಲಿಕಾಪ್ಟರ್‌ನಲ್ಲಿ ಜನರಲ್ ರಾವತ್  ಮತ್ತು ಇತರ ಸಿಬ್ಬಂದಿ ಸೇರಿದಂತೆ 13 ಪ್ರಯಾಣಿಕರಿದ್ದರು. ಕೂನೂರು ಬಳಿ ಅಪಘಾತ ಸಂಭವಿಸಿದೆ ಎಂದು ಐಎಎಫ್ ಖಚಿತಪಡಿಸಿದೆ. ಜನರಲ್ ರಾವತ್ ಅವರು ಅಧ್ಯಾಪಕರು ಮತ್ತು ವಿದ್ಯಾರ್ಥಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲು ವೆಲ್ಲಿಂಗ್ಟನ್ (ನೀಲಗಿರಿ ಹಿಲ್ಸ್) ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ಭೇಟಿ ನೀಡುವವರಿದ್ದರು.

ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜಿನಲ್ಲಿ ಸಿಬ್ಬಂದಿಯನ್ನು ನಿರ್ದೇಶಿಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಎಸ್‌ಸಿ, Mi-17V5 ಚಾಪರ್ ಒಳಗೊಂಡ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯಾಗಿದ್ದು, ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ತಿಳಿಸಿದೆ.

ಸಿಡಿಎಸ್ ರಾವತ್ ಅವರೊಂದಿಗೆ ತಮ್ಮ ಫೋಟೋವನ್ನು ಪೋಸ್ಟ್ ಮಾಡಿದ ಪ್ರಧಾನಿ, ಜನರಲ್ ರಾವತ್ ಅವರು ನಿಜವಾದ ದೇಶಭಕ್ತರಾಗಿದ್ದರು, ಅವರು “ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಹೆಚ್ಚಿನ ಕೊಡುಗೆ ನೀಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪೂರ್ಣ ಮೂರು ವರ್ಷಗಳ ಅವಧಿಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಂತರ ರಾವತ್ ಅವರು ಡಿಸೆಂಬರ್ 31, 2019 ರಂದು ಭಾರತದ ಮೊದಲ ರಕ್ಷಣಾ ಸಿಬ್ಬಂದಿಯಾಗಿ ಅಧಿಕಾರ ವಹಿಸಿಕೊಂಡರು.  ಜನರಲ್ ರಾವತ್ ಅವರ ಸಾವಿನ ಸುದ್ದಿ ಹೊರಬಿದ್ದ ತಕ್ಷಣ, ಹಿರಿಯ ಸಚಿವರು ಮತ್ತು ರಾಜಕೀಯ ಮುಖಂಡರು ದುರ್ಘಟನೆಯ ಬಗ್ಗೆ ತಮ್ಮ ದುಃಖ ಮತ್ತು ಆಘಾತವನ್ನು ವ್ಯಕ್ತಪಡಿಸಿದ್ದಾರೆ.

TV9 Kannada


Leave a Reply

Your email address will not be published. Required fields are marked *