ಅಥಣಿ ಬಳಿ ಕಾಲೇಜು ಬಸ್ ಮತ್ತು ಲಾರಿ ನಡುವೆ ಢಿಕ್ಕಿ, ಎರಡೂ ವಾಹನ ಚಾಲಕರ ದುರ್ಮರಣ, 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ | Drivers of both college bus and lorry die on the spot after a head on collision near Athaniಕೆಲ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವರೆಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಗೊಂಡವರನ್ನು ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

TV9kannada Web Team


| Edited By: Arun Belly

Aug 20, 2022 | 10:51 AM
ಬೆಳಗಾವಿ: ಶನಿವಾರ ಬೆಳ್ಳಂಬೆಳಗ್ಗೆಯೇ ಬೆಳಗಾವಿ ಜಿಲ್ಲೆ ಅಥಣಿ (Athani) ಪಟ್ಟಣದ ಹೊರವಲಯದಲ್ಲಿ ಕಾಲೇಜು ಬಸ್ ಮತ್ತು ಲಾರಿಯೊಂದರ ನಡುವೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಎರಡೂ ವಾಹನಗಳ ಚಾಲಕರು (drivers) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಕಾಲೇಜು ಬಸ್ ನಲ್ಲಿದ್ದ ವಿದ್ಯಾರ್ಥಿನಿಯರಲ್ಲಿ (students) 10 ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಲ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವರೆಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಗೊಂಡವರನ್ನು ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

TV9 Kannada


Leave a Reply

Your email address will not be published.