ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡಾ 5ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಅಂತಾ ಸಿಎಂ ಬಿಎಸ್​ ಯಡಿಯೂರಪ್ಪ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಿಎಸ್​ವೈ.. ಇನ್ನು ಶೇಕಡಾ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ. ಹೊಸದಾಗಿ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ತಿಳಿಸಿದ್ದಾರೆ.

The post ಅನ್​ಲಾಕ್​ 2.O: ಈ 13 ಜಿಲ್ಲೆಗಳಲ್ಲಿ ಯಾವುದೇ ಹೆಚ್ಚುವರಿ ಸಡಿಲಿಕೆ ಇಲ್ಲ appeared first on News First Kannada.

Source: newsfirstlive.com

Source link