ಅಪಘಾತದಲ್ಲಿ ಗಾಯಗೊಂಡವ್ರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವೀಯತೆ ಮೆರೆದ ಗೃಹಸಚಿವ


ಶಿವಮೊಗ್ಗ: ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ಗಾಯಾಳುಗಳಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ದಂಪತಿ ಚಲಿಸುತ್ತಿದ್ದ ಬೈಕ್​ ಅಪಘಾತಕ್ಕೆ ಒಳಗಾಗಿತ್ತು. ಅಪಘಾತದಲ್ಲಿ ಮಗುವಿಗೂ ಸಣ್ಣಪುಟ್ಟ ಗಾಯಗಳಾಗಿತ್ತು. ಈ ವೇಳೆ ಗೃಹಸಚಿವರು ತಮ್ಮ ಬೆಂಗಾವಲು ವಾಹನದಲ್ಲಿ ಗಾಯಾಳುಗಳನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಮಗುವಿನ ಜೊತೆ ಗೃಹ ಸಚಿವರು ಮಾತನಾಡಿದ್ದಾರೆ.

News First Live Kannada


Leave a Reply

Your email address will not be published. Required fields are marked *