ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರವಾರು ತಾರತಮ್ಯ ಆರೋಪ: ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ | Sector Discrimination Allegations of Development: Former Chief Minister H D Kumaraswamy Tweet


ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರವಾರು ತಾರತಮ್ಯ ಆರೋಪ: ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸಾಲು ಸಾಲು ಟ್ವೀಟ್

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ

ಸಿಲಿಕಾನ್‌ ಸಿಟಿಯನ್ನು ಸ್ವಿಮ್ಮಿಂಗ್‌ ಪೂಲ್‌ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ.

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಸರ್ವ ಜನಾಂಗದವರನ್ನು ಸಮಭಾವದಿಂದ ಕಂಡಿದ್ದರು. ಸರ್ವ ಜನಾಂಗದ ತೋಟ ನಿರ್ಮಿಸಿದ್ದರು. ಬೆಂಗಳೂರಿನ ಯಲಹಂಕದಲ್ಲಿ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಿರ್ದಿಷ್ಟವಾಗಿ ಒಂದು ಸಮುದಾಯವನ್ನೇ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದು, ಅವರು ವಾಸಿಸುವ ಬಡಾವಣೆಯನ್ನು ಕಡೆಗಣಿಸಿ ಟಾರ್ಗೆಟ್‌ ಮಾಡಲಾಗಿದೆ. ನಿನ್ನೆ ಯಲಹಂಕ ಕ್ಷೇತ್ರದ ಬೆಳೆ ಹಾನಿ ಪ್ರದೇಶ ವೀಕ್ಷಣೆಗೆ ತೆರಳಿದ್ದೆ, ಆಗ ನನಗೆ ‘ರಿಪಬ್ಲಿಕ್ ಆಫ್ ಯಲಹಂಕ’ದ ಮಹಾದರ್ಶನವೇ ಆಯಿತು. ನೈಜ ಸಂತ್ರಸ್ತರೇ ಅಹವಾಲು ಹೇಳಿಕೊಳ್ಳಲು ಮುಂದೆ ಬರಲಿಲ್ಲ. ಸಂತ್ರಸ್ತರು ಬಾರದೇ ಇರುವುದು ನನ್ನನ್ನು ಚಕಿತಗೊಳಿಸಿತು ಎಂದು ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಚುನಾವಣೆಯಲ್ಲಿ ಚಿಕ್ಕಬೆಟ್ಟಹಳ್ಳಿ ಜನ ಮತ ಕೊಡಲಿಲ್ಲ ಅಂತ ಕಡೆಗಣಸಲಾಗಿದೆ. ಇದಕ್ಕಿಂತ ಮಿಗಿಲಾದ ಪಾಪದ ಕೆಲಸ ಮತ್ತೊಂದಿಲ್ಲ. ಶಾಸಕರು ಇಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಬಾರದು. ನಾನೆಂದೂ, ಎಲ್ಲಿಯೂ ಇಂಥ ಕೆಟ್ಟ ರಾಜಕೀಯ ನೋಡಿಲ್ಲ. ಡಾಂಬರು ಇಲ್ಲದ ರಸ್ತೆಗಳು, ವಿದ್ಯುತ್ ದೀಪಗಳು ಇಲ್ಲದ ಬೀದಿಗಳು, ಕನಿಷ್ಠ ಮೂಲಸೌಕರ್ಯವೂ ಇಲ್ಲದ ಪ್ರದೇಶಗಳು ನನಗೆ ಕಂಡವು. ನನ್ನನ್ನು ಭೇಟಿಯಾಗಿ ದೂರು ನೀಡದಂತೆ ಸ್ಥಳೀಯ ಶಾಸಕರು ಬೆದರಿಕೆ ಹಾಕಿದ್ದಾರೆ. ಶಾಸಕರು & ಅವರ ಪಟಾಲಂ ಹೆದರಿಸಿದ್ದಾರೆನ್ನುವ ಮಾಹಿತಿ ಸಿಕ್ಕಿತು. ದೂರು ಕೊಟ್ಟರೆ ಇಡೀ ಅಪಾರ್ಟ್​​ಮೆಂಟ್ ನೆಲಸಮ ಮಾಡಿಸುತ್ತೇವೆ. ಅಲ್ಲಿನ ಸ್ಥಳೀಯ ನಿವಾಸಿಗಳನ್ನು ಶಾಸಕ ವಿಶ್ವನಾಥ್ ಬೆದರಿಕೆ ಹಾಕಿದ್ದಾರೆ. ಚಿಕ್ಕಬೆಟ್ಟಹಳ್ಳಿಗೆ ಒಂದು ತಿಂಗಳ ಒಳಗಾಗಿ ಮೂಲಸೌಕರ್ಯ ಕಲ್ಪಿಸಬೇಕು. ತಪ್ಪಿದರೆ ಖುದ್ದು ನಾನೇ ಅಲ್ಲಿಗೆ ಹೋಗಿ ಧರಣಿ ಕೂರಬೇಕಾಗುತ್ತದೆ ಎಂದು ಶಾಸಕ S​.R.ವಿಶ್ವನಾಥ್​ಗೆ ಟ್ವೀಟ್​ ಮೂಲಕ ಕುಮಾರಸ್ವಾಮಿ ವಾರ್ನಿಂಗ್ ಮಾಡಿದ್ದಾರೆ.

TV9 Kannada


Leave a Reply

Your email address will not be published. Required fields are marked *