ನವದೆಹಲಿ: ಕೇಂದ್ರ ಸಚಿವ ಸಂಪುಟದಲ್ಲಿ ಹಲವು ಮಹತ್ವದ ಬದಲಾವಣೆ ತರಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನಿನ್ನೆ ತಡರಾತ್ರಿ ನಾಲ್ಕು ಗಂಟೆಗಳ ಕಾಲ ಕೇಂದ್ರದ ಪ್ರಮುಖ ಸಚಿವರೊಂದಿಗೆ ಸಭೆ ನಡೆಸಿದ್ದಾರೆ.

ಕೇಂದ್ರ ಸಚಿವ ಸಂಪುಟದಲ್ಲಿರುವ ಐದರಿಂದ ಆರು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಹಲವು ಸಚಿವರ ಖಾತೆ ಬದಲಾವಣೆಯಾಗುವ ಸಾಧ್ಯತೆಯೂ ಇದೆ. ಸಚಿವರ ಕಾರ್ಯಕ್ಷಮತೆಯ ಆಧಾರದ ಮೇಲೆ ಕ್ಯಾಬಿನೆಟ್​​​ನಿಂದ ಕೆಲವರನ್ನ ಕೈಬಿಡಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದ್ದು, ಹೊಸ ಮುಖಗಳಿಗೆ ಈ ಬಾರಿ ಕ್ಯಾಬಿನೆಟ್​ನಲ್ಲಿ ಎಂಟ್ರಿ ಅವಕಾಶ ಹೆಚ್ಚಾಗಿದೆ ಎಂಬ ಮಾಹಿತಿ ಲಭಿಸಿದೆ.

ಸಂಪುಟ ಸರ್ಜರಿ ವೇಳೆ ಎನ್​​ಡಿಎ ಮೈತ್ರಿಕೂಟ ಪಕ್ಷದ ಸದಸ್ಯರಿಗೆ ಕ್ಯಾಬಿನೆಟ್​​ನಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಮುಂಬರುವ ವಿಧಾನಸಭಾ ಚುನಾವಣಾ ರಾಜ್ಯಗಳ ಸಂಸದರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಅಂತ ಹೇಳಲಾಗ್ತಿದೆ. ಜೊತೆಗೆ 2024 ರ ಲೋಕಸಭಾ ಚುನಾವಣೆಗಾಗಿ ಈಗಿನಿಂದಲೇ ತಯಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಈ ಮೂಲಕ ಪಕ್ಷ ಸಂಘಟನೆಯ ಬಗ್ಗೆ ಪ್ಲಾನ್​ ಮಾಡ್ತಿದೆ ಎಂಬ ಮಾತು ಕೇಳಿಬಂದಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮೀತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗಿಯಾಗಿದ್ದರು. ಕೊರೊನಾ ಎರಡನೇ ಅಲೆಯನ್ನು ನಿರ್ವಹಿಸಲು ಮೋದಿ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷಗಳು ಗಂಭೀರ ಆರೋಪ ಮಾಡಿದ್ದವು. ಪ್ರತಿ ತಿಂಗಳು ಸಂಪುಟ ಸಭೆ ನಡೆಸಿದರೂ ಈ ಬಾರಿ ಪ್ರತ್ಯೇಕವಾಗಿ ಸಭೆ ನಡೆದ ಕಾರಣ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.

The post ಅಮಿತ್​ ಶಾ, ನಡ್ಡಾ ಜೊತೆ ಮೋದಿ ಮಹತ್ವದ ಸಭೆ -ಕೇಂದ್ರ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ appeared first on News First Kannada.

Source: newsfirstlive.com

Source link