ಲಕ್ನೋ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ತಮ್ಮ ಹಿಂದಿನ ಲೋಕಸಭಾ ಕ್ಷೇತ್ರವಾದ ಅಮೆಥಿಯಲ್ಲಿ ಹೋಂ ಐಸೋಲೇಷನ್‍ನಲ್ಲಿರುವ ಕೋವಿಡ್-19 ಸೋಂಕಿತರಿಗೆ ಅಗತ್ಯವಿರುವ ಮೆಡಿಕಲ್ ಕಿಟ್‍ನನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.

ಪಕ್ಷದ ಸೇವಾ ಸತ್ಯಾಗ್ರಹ ಕಾರ್ಯಕ್ರಮದಡಿ ಸುಮಾರು 10,000 ಮೆಡಿಕಲ್ ಕಿಟ್‍ಗಳು ಬಂದಿದ್ದು, ಅವುಗಳನ್ನು ಅಗತ್ಯವಿರುವ ಜನರಿಗೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಮುಖ್ಯಸ್ಥ ಪ್ರದೀಪ್ ಸಿಂಘಾಲ್ ತಿಳಿಸಿದ್ದಾರೆ.

ಅಮೆಥಿಯ ಮಾಜಿ ಲೋಕಸಭಾ ಸಂಸದರಾಗಿರುವ ರಾಹುಲ್ ಗಾಂಧಿಯವರು ಈ ಮುನ್ನ 20 ಆಮ್ಲಜನಕ ಸಾಂದ್ರಕ ಮತ್ತು ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳುಹಿಸಿಕೊಟ್ಟಿದ್ದರು. ಸದ್ಯ ರಾಹುಲ್ ಗಾಂಧಿಯವರು ಕೇರಳದ ವಯನಾಡುವಿನ ಲೋಕಸಭಾ ಸಂಸದರಾಗಿದ್ದಾರೆ. ಇದನ್ನು ಓದಿ: ಪತಿಯ ಸಮ್ಮುಖದಲ್ಲಿಯೇ ಪ್ರೇಮಿಯ ಜೊತೆ ಪತ್ನಿಯ ಮದುವೆ

The post ಅಮೇಥಿಗೆ 10,000 ಮೆಡಿಕಲ್ ಕಿಟ್ ಕಳುಹಿಸಿಕೊಟ್ಟ ರಾಹುಲ್ ಗಾಂಧಿ appeared first on Public TV.

Source: publictv.in

Source link