ಉಡುಪಿ: ಅಯೋಧ್ಯಾ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಧರ್ಮನಗರಿಗೆ ಭೇಟಿ ನೀಡಿ, ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.

ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ತಳಹದಿ ತುಂಬಿಸುವ ಕಾಮಗಾರಿ ಆರಂಭವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಆರಂಭದಲ್ಲಿ ಶ್ರೀರಾಮ ಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ ಪೇಜಾವರ ಶ್ರೀಗಳು ದರ್ಶನ ಪಡೆದರು.

ದೇವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಮಾಡಿದರು. ಬಳಿಕ ಅಲ್ಲಿಂದ ಮಂದಿರ ನಿರ್ಮಾಣ ಮಾಡುವ ಬುನಾದಿ ತುಂಬಿಸುವ ಸ್ಥಳಕ್ಕೆ ತೆರಳಿ, ಅಲ್ಲಿ ನಡೆಯುತ್ತಿರುವ ಕಾಮಗಾರಿ ಪರಿವೀಕ್ಷಿಸಿದರು. ಕಾಮಗಾರಿಯ ಪ್ರಗತಿಯನ್ನು ಇಂಜಿನಿಯರ್ಸ್ ವಿವರಿಸಿದರು.

The post ಅಯೋಧ್ಯೆ ರಾಮ ಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರ ಶ್ರೀ appeared first on News First Kannada.

Source: newsfirstlive.com

Source link