ಅಯೋಧ್ಯೆ ರಾಮ ಮಂದಿರ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ | Uttar Pradesh government Orders Ban on Sale of Liquor Near Ayodhya Ram Temple Complex


ಅಯೋಧ್ಯೆ ರಾಮ ಮಂದಿರ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ

ಯೋಗಿ ಆದಿತ್ಯನಾಥ

ರಾಮ ಮಂದಿರ ಪ್ರದೇಶದಲ್ಲಿನ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಅಬಕಾರಿ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರವಾಲ್ ಬುಧವಾರ ಹೇಳಿದ್ದಾರೆ.

ಅಯೋಧ್ಯೆಯ ರಾಮ ಜನ್ಮಭೂಮಿ (Ram Janambhoomi temple) ದೇಗುಲ ಸಂಕೀರ್ಣದ ಸುತ್ತಮುತ್ತ ಮದ್ಯ ಮಾರಾಟವನ್ನು(liquor ban) ನಿಷೇಧಿಸಿ ಉತ್ತರ ಪ್ರದೇಶ (Uttar Pradesh) ಸರ್ಕಾರ ಆದೇಶ ಹೊರಡಿಸಿದೆ. ರಾಮ ಮಂದಿರ ಪ್ರದೇಶದಲ್ಲಿನ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಅಬಕಾರಿ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರವಾಲ್ ಬುಧವಾರ ಹೇಳಿದ್ದಾರೆ. ಧಾರ್ಮಿಕ ಸ್ಥಳಗಳ ಸುತ್ತಲೂ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಬೇಕೆಂದು ಸಂತರು ಮತ್ತು ಧರ್ಮದರ್ಶಿಗಳು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿಷೇಧ ನಿರ್ಧಾರ ಬಂದಿದೆ. ಕಳೆದ ವರ್ಷ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಅವರು ಮಥುರಾದ ಯಾತ್ರಾ ಸ್ಥಳಗಳ ಬಳಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಜನರು ಬೇರೆ ಯಾವುದಾದರೂ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಸಹಾಯ ಮಾಡುವಂತೆ ಯೋಜನೆ ರೂಪಿಸಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದೇ ವೇಳೆ ಈವರೆಗೆ ಮದ್ಯ ಮಾರಾಟ ಮಾಡುತ್ತಿದ್ದವರು ಹಾಲು ಮಾರಾಟವನ್ನು ಕೈಗೆತ್ತಿಕೊಳ್ಳಬಹುದು. ಮಥುರಾದಲ್ಲಿ ಹಾಲು ಉದ್ಯಮವನ್ನು ಪುನರುಜ್ಜೀವನಗೊಳಿಸಬಹುದು ಎಂದು ಸರ್ಕಾರ ಸಲಹೆ ನೀಡಿದೆ. ಮಥುರಾದಲ್ಲಿ ಬೃಹತ್ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದೆ.

ಬುಧವಾರದಿಂದ ಮಥುರಾದಲ್ಲಿ ಹೋಟೆಲ್‌ಗಳಲ್ಲಿರುವ ಸುಮಾರು ಮೂರು ಬಾರ್‌ಗಳು ಮತ್ತು ಎರಡು ಅಂಗಡಿಗಳು ಸಹ ಮುಚ್ಚಲ್ಪಡುತ್ತವೆ. ಕಳೆದ ವರ್ಷ ಯೋಗಿ ಆದಿತ್ಯನಾಥ ಅವರು ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಿದ್ದರು.

2021ರಲ್ಲಿಯೂ ಇದೇ ರೀತಿಯ ಆದೇಶ ಹೊರಡಿಸಲಾಗಿತ್ತು

ಸೆಪ್ಟೆಂಬರ್ 2021 ರಲ್ಲಿ ರಾಜ್ಯ ಸರ್ಕಾರವು ಮಥುರಾ-ವೃಂದಾವನದ 10 ಚದರ ಕಿಲೋಮೀಟರ್ ಪ್ರದೇಶವನ್ನು ಯಾತ್ರಾ ಸ್ಥಳವೆಂದು ಘೋಷಿಸಿತು, ಈ ಪ್ರದೇಶದಲ್ಲಿ ಯಾವುದೇ ಮದ್ಯ ಮತ್ತು ಮಾಂಸ ಮಾರಾಟವನ್ನು ಅನುಮತಿಸಲಾಗುವುದಿಲ್ಲ ಎಂದು ಕೃಷ್ಣೋತ್ಸವ 2021 ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದರು.

TV9 Kannada


Leave a Reply

Your email address will not be published. Required fields are marked *