ಅಲ್ಪಸಂಖ್ಯಾತರೇ! ಕರ್ನಾಟಕ ಕಾಂಗ್ರೆಸ್​​ನ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ ನೋಡಿ: ಕರ್ನಾಟಕ ರಾಜ್ಯ ಬಿಜೆಪಿ ಟ್ವೀಟ್ | Karnataka politics BJP tweet against Congress


ಅಲ್ಪಸಂಖ್ಯಾತರೇ! ಕರ್ನಾಟಕ ಕಾಂಗ್ರೆಸ್​​ನ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ ನೋಡಿ: ಕರ್ನಾಟಕ ರಾಜ್ಯ ಬಿಜೆಪಿ ಟ್ವೀಟ್

ಕರ್ನಾಟಕ ರಾಜ್ಯ ಬಿಜೆಪಿ ಘಟಕ ಟ್ವೀಟ್

ಬೆಂಗಳೂರು: ಮುಸ್ಲಿಮರು ಒಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ, ಉಗ್ರಪ್ಪ ಅವರಿಗೆ ಬರೇ ನೋಟೀಸ್‌ ನೀಡಿದೆ. ಅಲ್ಪಸಂಖ್ಯಾತರೇ, ಕರ್ನಾಟಕ ಕಾಂಗ್ರೆಸ್ ಪಕ್ಷದ (Karnataka congress) ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ ಎಂದು ಕರ್ನಾಟಕ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಹೊರ ನಡೆದಿದ್ದಾರೆ. ಇದಕ್ಕೆ ಕಾರಣ “ಡಿಕೆ ಡಿಕೆ” ಎಂಬ ಘೋಷಣೆ. ಅಲ್ಲಿಗೆ ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್‌ನಲ್ಲಿ ಇದು ಸಾಮಾನ್ಯವಲ್ಲವೇ ಎಂದು ಕರ್ನಾಟಕ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮೂಲಕ ತಿಳಿಸಿದೆ.

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು ಎಂದು ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ? ಎಂದು ಕರ್ನಾಟಕ ರಾಜ್ಯ ಬಿಜೆಪಿ ಘಟಕ ಸರಣಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:
ಕಟೀಲ್ ನಕಲಿ ಆಡಿಯೋ ಹಿಂದಿರುವ ಕಾಣದ ಕೈ ಕಾಂಗ್ರೆಸ್ ಮಹಾ ನಾಯಕನದ್ದೋ, ಮೀರ್ ಸಾದಿಕ್‌ನದ್ದೋ? ಕರ್ನಾಟಕ ಬಿಜೆಪಿ ಟ್ವೀಟ್‌

ಅತ್ಯಂತ ಅಸಹಾಯಕ ಅಧ್ಯಕ್ಷ ಎಂಬ ಪಟ್ಟ ಡಿಕೆ ಶಿವಕುಮಾರ್​ಗೆ: ಟ್ವೀಟ್ ಮೂಲಕ ಟಾಂಗ್ ಕೊಟ್ಟ ಬಿಜೆಪಿ

TV9 Kannada


Leave a Reply

Your email address will not be published. Required fields are marked *