ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಚುನಾವಣೆ ಎದುರಿಸಲು ಸಿದ್ಧವಾಗಿದ್ದ ಸಂದೇಶ್ ನಾಗರಾಜ್ ಅವರಿಗೆ ಟಿಕೆಟ್ ನೀಡಿರಲಿಲ್ಲ. ಆದರೆ ಈ ಬಾರಿ ತಮಗೆ ಟಿಕೆಟ್ ನೀಡದಿರಲು ಕಾರಣ ಏನು ಎಂಬುವುದನ್ನು ಸಂದೇಶ್ ನಾಗರಾಜ್ ತಿಳಿಸಿದ್ದಾರೆ.
ಈ ಪತ್ರವೊಂದನ್ನು ಹಂಚಿಕೊಂಡಿರುವ ಸಂದೇಶ್ ನಾಗರಾಜ್ ಅವರು, ಈ ಬಾರಿ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಅಂತ ತಿಳಿಸಲು ವಿಷಾದಿಸುತ್ತೇನೆ. 12 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ ತೃಪ್ತಿ ನನಗಿದೆ. ಆ ಮೂಲಕ ಮತದಾರರು ಹಾಗೂ ಪಕ್ಷದ ಋಣ ತೀಲಿಸಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದೆ. ಆದರೆ ಪಕ್ಷದ ನಿಯಮದಂತೆ ವಯೋಮಿತಿಯ ಕಾರಣಕ್ಕೆ ನನಗೆ ಟಿಕೆಟ್ ಕೈ ತಪ್ಪಿದೆ. ಆದರೂ ನನಗೆ ಒತ್ತಾಸೆಯಾಗಿ ಶ್ರಮಿಸಿದ ಬಿಜೆಪಿಯ ಎಲ್ಲಾ ಮುಖಂಡಲಗೂ ವಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
ಅಲ್ಲದೇ ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮೈಸೂರು ನಗರಾಧ್ಯಕ್ಷರಾದ ಶ್ರೀವತ್ಸ, ರವಿಶಂಕರ್, ಹೇಮಂತ್ಕುಮಾರ್, ಫಣೀಶ್ ಸೇರಿದಂತೆ ಎಲ್ಲಾ ಮುಖಂಡರು, ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದ್ದಾರೆ. ಈ ನಡುವೆ ನನ್ನ ಚುನಾವಣೆ ಸ್ಪರ್ಧೆಗೆ ಜಾ.ದಳದಿಂದಲೂ ಒಲವು ತೋರಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ರೇವಣ್ಣ ಅವರಿಗೂ ಧನ್ಯವಾದಗಳು. ಎಲ್ಲಾ ಅಭಿಮಾನಿ ದೇವರುಗಆಗೂ ಕೃತಜ್ಞತೆಗಳು. ನನ್ನ ಜನ ಸೇವೆ ಹೀಗೆಯೇ ಮುಂದುವರೆಯುವುದು ಎಂದು ಸ್ಪಷ್ಟಪಡಿಸಿದ್ದಾರೆ.