ಬೆಂಗಳೂರು: ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡ ನೋವು ಮಾಸುವ ಮುನ್ನವೇ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಇಂದು ಅಶ್ವಿನಿ ಅವರ ತಂದೆ ರೇವನಾಥ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ತಂದೆ ರೇವನಾಥ್ ಜಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾಗಮನೆಯ ಮೂಲದವರಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆಯಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರು ಮನೆಯವರು ಸ್ನೇಹಿತರ ಜೊತೆ ಓಡಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಇಂದು ದಿಢೀರ್ ಎಂದು ಅನಾರೋಗ್ಯ ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ರೇವನಾಥ್ ಅವರು ಚಿಕಿತ್ಸೆ ಫಲಕಾರಿಯಾಗದೆ ಎಂಎಸ್ ರಾಮಯ್ಯ ಆಸ್ಪತ್ರೆ ನಿಧನರಾಗಿದ್ದಾರೆ. ರೇವನಾಥ್ ಅವರು ಹಿರಿಯ ರಾಜಕಾರಣಿ ಡಿ.ಬಿ ಚಂದ್ರೇಗೌಡರ ಹತ್ತಿರದ ಸಂಬಂಧಿಯಾಗಿದ್ದರು.