ಅಶ್ಲೀಲ ಸಿನಿಮಾಗಳ ನಿರ್ಮಾಣ ಆರೋಪ; ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಅಶ್ಲೀಲ ಸಿನಿಮಾಗಳ ನಿರ್ಮಾಣ ಆರೋಪ; ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಮುಂಬೈ: ಕೆಲವು ಆ್ಯಪ್​ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನ ನಿರ್ಮಾಣ ಮಾಡಿ ಪ್ರಕಟಿಸುತ್ತಿದ್ದರೆಂಬ ಆರೋಪದ ಮೇಲೆ ಮುಂಬೈ ಕ್ರೈಮ್ ಬ್ರಾಂಚ್ ಬ್ಯುಸಿನೆಸ್ ಮನ್ ರಾಜ್ ಕುಂದ್ರಾ ಅವರನ್ನ ಬಂಧಿಸಿದೆ.

ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರೇ ಪ್ರಮುಖ ಆರೋಪಿ.. ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸೂಕ್ತ ಸಾಕ್ಷ್ಯವಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದಾರೆ. ರಾಜ್​ ಕುಂದ್ರಾ ಇಂದು ವಿಚಾರಣೆಗಾಗಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್​ ಪ್ರಾಪರ್ಟಿ ಸೆಲ್​ಗೆ ಬಂದಿದ್ದರು ಈ ವೇಳೆ ಅವರನ್ನ ಬಂಧಿಸಲಾಗಿದೆ ಎಂಬ ಮಾಹಿತಿ ಇದೆ.

The post ಅಶ್ಲೀಲ ಸಿನಿಮಾಗಳ ನಿರ್ಮಾಣ ಆರೋಪ; ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ appeared first on News First Kannada.

Source: newsfirstlive.com

Source link