ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಆಂಧ್ರದಲ್ಲಂತೂ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಇಲ್ಲಿಯವರೆಗೆ ಮಳೆ ಸಂಬಂಧಿತ ಅವಘಡಗಳಿಗೆ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಹ, ಭೂಕುಸಿತ ಸೇರಿದಂತೆ ವರುಣನ ಅವಾಂತರದಲ್ಲಿ ಬಲಿಯಾದವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ. ಇನ್ನು 12ಕ್ಕೂ ಹೆಚ್ಚು ಮಂದಿ ನಾಪತ್ತೆ ಆಗಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.
ಇನ್ನು ಅನಂತಪುರದ ಚಿತ್ರಾವತಿ ನದಿ ತುಂಬಿ ಹರಿಯುತ್ತಿದೆ. ಜಿಲ್ಲೆಯ ರಾಪ್ತಾಡಿನ ಚಿನ್ನ ಕೊತ್ತಪಲ್ಲಿ ವಲಯದ ವೆಲ್ದುರ್ತಿಯಲ್ಲಿ 11 ಮಂದಿ ನದಿಯಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದರು. ನಂತರ ವಾಯುಪಡೆ ಹೆಲಿಕಾಪ್ಟರ್ ಸಹಾಯದಿಂದ ಅವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.
The post ಆಂಧ್ರಪ್ರದೇಶದಲ್ಲಿ ಭೀಕರ ಪ್ರವಾಹ.. 14 ಸಾವು.. 12 ಮಂದಿ ಕಣ್ಮರೆ appeared first on News First Kannada.