ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್  ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸಂಸದೀಯ ಹಾಗೂ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾದ ಆಕ್ಸಿಜನ್ ಘಟಕಕ್ಕೆ ಇಂದು ಚಾಲನೆ ನೀಡಿದ್ದಾರೆ.

 L&T ಕಂಪನಿ CSR ಅಡಿ ಪ್ರತಿ ನಿಮಿಷಕ್ಕೆ 1000 ಲೀಟರ್ ದ್ರವ ಆಕ್ಸಿಜನ್ ಉತ್ಪಾದನಾ ಸಾಮಥ್ರ್ಯ ವಿರುವ ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆ ಮಾಡಿದ್ದು, ನೂತನ ಆಕ್ಸಿಜನ್ ಘಟಕಕ್ಕೆ ಸ್ವತಃ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು.

ಆಕ್ಸಿಜನ್ ಘಟಕ ಉತ್ಪಾದನೆಗೆ ಈಗಾಗಲೇ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿದ್ದು, ಇನ್ನು ಈ ಘಟಕಗಳು ಕಾರ್ಯನಿರ್ವಹಿಸಲಿವೆ. ಪ್ರತಿ ನಿಮಿಷಕ್ಕೆ 1000 ಲೀಟರ ದ್ರವ ಆಕ್ಸಿಜನ್ ಉತ್ಪಾದನಾ ಸಾಮಥ್ರ್ಯ ಹೊಂದಿದ್ದು ತುರ್ತು ಪರಿಸ್ಥಿತಿಯಲ್ಲಿ ಸೋಂಕಿತರು ಹಾಗೂ ರೋಗಿಗಳ ಚಿಕಿತ್ಸೆಗೆ ಅನುಕೂಲವಾಗಲಿದೆ. ಕೋವಿಡ್ ನಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ತಮ್ಮ ಮನವಿಗೆ ಸ್ಪಂದಿಸಿದ L&T ಕಂಪನಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದರು. ಇದನ್ನೂ ಓದಿ:  ಆಭರಣ ಧರಿಸಿ ಮಿಯಾ ಖಲೀಫಾ ಹಾಟ್ ಫೋಟೋಶೂಟ್

 

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಗದೀಶ ಶೆಟ್ಟರ್, ಶ್ರೀ ಪ್ರದೀಪ್ ಶೆಟ್ಟರ್, ಶ್ರೀ ನಾಗೇಶ್ ಕಲಬುರ್ಗಿ, ಜಿಲ್ಲಾಧಿಕಾರಿ ಶ್ರೀ ನಿತೇಶ್ ಪಾಟೀಲ್, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಉಪಸ್ಥಿತರಿದ್ದರು.

The post ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Public TV.

Source: publictv.in

Source link