ಆಗಸ್ಟ್‌ 15ರಂದು ಹಲವಾರು ಕಾರ್ಯಕ್ರಮಗಳು ಆಯೋಜನೆ: ಸಂಚಾರ ದಟ್ಟಣೆ ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಪ್ಲ್ಯಾನ್‌ | Bengaluru police commissioner send circular to traffic police regards to avoid traffic on august 15th


ಸ್ವಾತಂತ್ರ್ಯ ದಿನಾಚರಣೆ ದಿನ ಯಾವ ಯಾವ ರಸ್ತೆಯಲ್ಲಿ ಯಾವ ಸಮಯದಲ್ಲಿ ಸಂಚಾರ ಅವೈಡ್ ಮಾಡಬೇಕು ಅನ್ನೋದ್ರ ಬಗ್ಗೆ ಸಂಚಾರಿ ಪೊಲೀಸ್ ಆಯುಕ್ತರು ಸುತ್ತೋಲೆ ಪ್ರಕಟಿಸಿದ್ದಾರೆ.

ಆಗಸ್ಟ್‌ 15ರಂದು ಹಲವಾರು ಕಾರ್ಯಕ್ರಮಗಳು ಆಯೋಜನೆ: ಸಂಚಾರ ದಟ್ಟಣೆ ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಪ್ಲ್ಯಾನ್‌

ಟ್ರಾಫಿಕ್ ಪೊಲೀಸರು

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪಾದಯಾತ್ರೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಆಗಸ್ಟ್ 15ರಂದು ಮಧ್ಯಾಹ್ನ 2 ಗಂಟೆಗೆ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪಾದಯಾತ್ರೆ ಆರಂಭವಾಗಿ ಕೆ.ಆರ್.ವೃತ್ತ, ಹಡ್ಸನ್ ಸರ್ಕಲ್, ಜೆ.ಸಿ.ರಸ್ತೆ, ಮಿನರ್ವ ವೃತ್ತ, ವಿ.ವಿ.ಪುರಂ ವೃತ್ತ ಮಾರ್ಗವಾಗಿ ಫ್ರೀಡಂ ಮಾರ್ಚ್ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಲಿದೆ. ಫ್ರೀಡಂ ಮಾರ್ಚ್ನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅಲ್ಲದೆ ಆಗಸ್ಟ್ 15 ರಂದು ಹಲವು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿದೆ. ಹೀಗಾಗಿ ಆಗಸ್ಟ್ 15ರ ಸೋಮವಾರದಂದು ಭಾರೀ ಟ್ರಾಫಿಕ್ ಬಿಸಿ ತಟ್ಟಲಿದ್ದು ಬೆಂಗಳೂರು ಟ್ರಾಫಿಕ್ ಪೊಲೀಸರು ಟ್ರಾಫಿಕ್ ಕಂಟ್ರೋಲ್ಗೆ ಪ್ಲಾನ್ ಮಾಡಿಕೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ದಿನ ಯಾವ ಯಾವ ರಸ್ತೆಯಲ್ಲಿ ಯಾವ ಸಮಯದಲ್ಲಿ ಸಂಚಾರ ಅವೈಡ್ ಮಾಡಬೇಕು ಅನ್ನೋದ್ರ ಬಗ್ಗೆ ಸಂಚಾರಿ ಪೊಲೀಸ್ ಆಯುಕ್ತರು ಸುತ್ತೋಲೆ ಪ್ರಕಟಿಸಿದ್ದಾರೆ. ಬೆಳಗ್ಗೆ 6.30 ರಿಂದ 8 ಗಂಟೆವರೆಗೆ ಹೆಸರಘಟ್ಟ ಮುಖ್ಯ ರಸ್ತೆಯಲ್ಲಿ ಸಂಚಾರದಲ್ಲಿ ದಟ್ಟಣೆ ಸಾಧ್ಯತೆ ಇದೆ.

ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಹೆಚ್ಎಂಟಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಇದೆ.

ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ವಿಠಲ್ ನಾಗರಾಜ ರಸ್ತೆ, ರಾಜ್ ಕುಮಾರ್ ರಸ್ತೆ, ತುಮಕೂರು ರಸ್ತೆ, ಶೇಷಾದ್ರಿ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಲಿದೆ.

TV9 Kannada


Leave a Reply

Your email address will not be published. Required fields are marked *