ಆಗಸ್ಟ್ 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ  ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ: ಆರ್.ಧ್ರುವನಾರಾಯಣ | We will make a campaign in every district to make awareness about Independence day said R Druvanarayan


ಆಗಸ್ಟ್ 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ  ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ: ಆರ್.ಧ್ರುವನಾರಾಯಣ

ಆರ್​ ಧ್ರುವನಾರಾಯಣ

ಆಗಸ್ಟ್ 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ  ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ ಮಾಡುತ್ತೇವೆ ಎಂದು ಸಾಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚಿಂತನಾ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದ್ದಾರೆ.

ಶಿವಮೊಗ್ಗ: ಆಗಸ್ಟ್ (August) 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ (Independence day)   ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ ಮಾಡುತ್ತೇವೆ ಎಂದು ಸಾಗರದಲ್ಲಿ (Sagar) ನಡೆದ ಕಾಂಗ್ರೆಸ್ (Congress) ಪಕ್ಷದ ಚಿಂತನಾ ಸಭೆಯಲ್ಲಿ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದ್ದಾರೆ. ಒಂದು ತಿಂಗಳೊಳಗೆ ಪಕ್ಷದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುತ್ತೇವೆ. ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ ಜನತಾ ದಳ, ಜನತಾ‌ಪಕ್ಷವಿದ್ದಾಗಲೂ ಇಷ್ಟು ವಿರೋಧಿ ಅಲೆ ಇರಲಿಲ್ಲ. ಹಾಲಿ ಬಿಜೆಪಿ ಸರ್ಕಾರದಲ್ಲಿ ಬೆಲೆ ಏರಿಕೆ, ಭ್ರಷ್ಟಾಚಾರ ವ್ಯಾಪಕವಾಗಿದೆ. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಎಂದೂ ಗೆದ್ದಿರಲಿಲ್ಲ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಧು ಜಿ.ಮಾದೇಗೌಡ ಗೆದ್ದಿದ್ದಾರೆ. ಪದವೀಧರ ಮತದಾರರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಬೆಂಗಳೂರು ಮಳೆಯಲ್ಲಿ ಕೊಚ್ಚಿ ಹೋದ ಇಂಜಿನಿಯರ್! ಇನ್ನೂ ಪತ್ತೆಯಾಗದ ಮೃತದೇಹ, ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಜೂ.20 ರಂದು ಮೈಸೂರಿಗೆ ಪ್ರಧಾನಿ ಮೋದಿ ಬರ್ತಾ ಇದ್ದಾರೆ. ಈ ಸಂಬಂಧ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸಿ ಪ್ರಧಾನಿ ಮೋದಿಗೆ ಗಿಫ್ಟ್ ನೀಡೋಣ ವೆಂದು ಪ್ರಚಾರ ಮಾಡಿದ್ದರು. ಜನ ಬಿಜೆಪಿಗೆ ಸಕ್ಕತ್ ಶಾಕ್ ಕೊಟ್ಟಿದ್ದಾರೆ.

ಇದನ್ನು ಓದಿ: ಜೂನ್ 21 ರಿಂದ ಆಗಸ್ಟ್ 14 ರವರೆಗೆ ಯೋಗಥಾನ್; ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಸಮಿತಿ ರಚನೆ ಸರ್ಕಾರ ಆದೇಶ

ಕಾಂಗ್ರೆಸ್ ಪಕ್ಷದ ಚಿಂತನ ಸಭೆಗೆ  ಗೃರಾದವರ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಗೆ ರವಾನೆ ಮಾಡುತ್ತೇವೆ ಎಂದು ಧ್ರುವನಾರಾಯಣ ಎಚ್ಚರಿಕೆ ನೀಡಿದ್ದಾರೆ. ಚಿಂತನ ಸಭೆಗೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೈರಾಗಿದ್ದರು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಪಕ್ಷವನ್ನು ತಳಮಟ್ಟದಿಂದ ಗಟ್ಟಿಮಾಡುವ ಕೆಲಸ ಆಗಬೇಕಾಗಿದೆ. ಪಕ್ಷದ ಚಿಂತನ ಶಿಬಿರಕ್ಕೆ ಜಿಲ್ಲೆಯ ಎಲ್ಲ ನಾಯಕರು ಹಾಜರಾಗಬೇಕು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್​ ಇದೆ. ಶಿವಮೊಗ್ಗ ಜಿಲ್ಲೆಯ ಇತರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಪಕ್ಷ ಗೆದ್ದಿಲ್ಲ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ ಗೈರು ಹಾಜರಿಗೆ ಆಕ್ರೋಶ ಹೊರಹಾಕಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published.