
ಮಹಮ್ಮದ್ ಸಾಹಿಲ್ (10) ಮೃತ ಬಾಲಕ.
ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದಿದ್ದಾನೆ. ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಮಂಗಳೂರು: ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದು ಸಾವನ್ನಪ್ಪಿರುವಂತಹ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಜಿನ ಕಲ್ಲಡ್ಕದಲ್ಲಿ ನಡೆದಿದೆ. ಮಹಮ್ಮದ್ ಸಾಹಿಲ್ (10) ಮೃತ ಬಾಲಕ. ನಿನ್ನೆ ರಾತ್ರಿ ವೇಳೆ ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದಿದ್ದಾನೆ. ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಂಟ್ಚಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಏಕಾಏಕಿ ಕಟ್ಟಡ ಕುಸಿತ: ಕಾರ್ಮಿಕ ಸಾವು
ರಾಯಚೂರು: ಬಸ್ ನಿಲ್ದಾಣ ನೆಲಸಮ ಮಾಡೊ ವೇಳೆ ಏಕಾಏಕಿ ಕಟ್ಟಡ ಕುಸಿತದಿಂದಾಗಿ ಕಾರ್ಮಿಕ ಮೃತಪಟ್ಟಿರುವಂತಹ ಘಟನೆ ಜಿಲ್ಲೆ ಸಿರವಾರ ಪಟ್ಟಣದಲ್ಲಿ ಘಟನೆ ನಡೆದಿದೆ. ಸಿರವಾರ ಮೂಲದ ಬಾಬು(30)ಮೃತ ಕಾರ್ಮಿಕ. ಸಿರವಾರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಹಳೆ ಕಟ್ಟಡ ಡೆಮಾಲಿಷನ್ ಮಾಡುವ ವೇಳೆ ಅವಘಡ ಸಂಭವಿಸಿದೆ. ಕೆಳಗಡೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಬಾಬುನ ಮೇಲೆ ಕಟ್ಟಡದ ಅವಶೇಷಗಳು ಕುಸಿದು ಬಿದ್ದಿದೆ. ಘಟನೆಯಲ್ಲಿ ಕಾರ್ಮಿಕ ಬಾಬು ಸ್ಥಳದಲ್ಲಿ ಸಾವನ್ನಪ್ಪಿದ್ದು, ಸ್ಥಳಕ್ಕೆ ಸಿರವಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.