ಹುಬ್ಬಳ್ಳಿ: ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಗಬ್ಬೂರ ಬೈಪಾಸ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಹೊರಟಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಪೊಲೀಸರು ರಸ್ತೆ ಸಂಚಾರವನ್ನು ಸುಗಮಗೊಳಿಸುತ್ತಲೇ ಅಂಬುಲೆನ್ಸ್ ಮೂಲಕ ಶವಗಳನ್ನು ಕಿಮ್ಸಗೆ ರವಾನೆ ಮಾಡಿ, ಲಾರಿ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಉತ್ತರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

The post ಆಟೋಗೆ ಲಾರಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು appeared first on Public TV.

Source: publictv.in

Source link