ಆಟೋರಿಕ್ಷಾ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ; 9 ಜನರ ಸಾವು | Accident Between Bus and Auto 9 Death in West Bengal


ಆಟೋರಿಕ್ಷಾ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಪಶ್ಚಿಮ ಬಂಗಾಳದ ಮಲ್ಲಾರ್ಪುರ್ ಬಳಿಯ ರಾಂಪುರ್ಹತ್ ರಾಷ್ಟ್ರೀಯ ಹೆದ್ದಾರಿ 60ರಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ: ಆಟೋರಿಕ್ಷಾ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಪಶ್ಚಿಮ ಬಂಗಾಳದ ಮಲ್ಲಾರ್ಪುರ್ ಬಳಿಯ ರಾಂಪುರ್ಹತ್ ರಾಷ್ಟ್ರೀಯ ಹೆದ್ದಾರಿ 60ರಲ್ಲಿ ನಡೆದಿದೆ. ಘಟನೆಯಲ್ಲಿ 9 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್​​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪಶ್ಚಿಮ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (SBSTC) ಬಸ್​ಗೆ ಆಟೋರಿಕ್ಷಾ ಡಿಕ್ಕಿ ಹೊಡೆದಿದೆ. ಮೃತ 9 ಜನರು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು ಎಂದು ಬಿರ್ಭುಮ್ ಎಸ್ಪಿ ನಾಗೇಂದ್ರ ನಾಥ್ ತ್ರಿಪಾಠಿ ಹೇಳಿದ್ದಾರೆ.

ಬಸ್ ಓವರ್ ಟೇಕ್ ಮಾಡಲು ಹೋಗಿ ಹಳ್ಳಕ್ಕೆ ಬಿದ್ದ ಕಾರು

ತಮಿಳುನಾಡು: ಬಸ್ ಓವರ್ ಟೇಕ್ ಮಾಡಲು ಹೋಗಿ ಕಾರು ಹಳ್ಳಕ್ಕೆ ಬಿದ್ದಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ‌ಹೊಸೂರಿನ ಸುಂಡಗಿರಿ ಬಳಿ ನಡೆದಿದೆ. ಕಾರಿನಲ್ಲಿದ್ದ 7 ಜನರಿಗೆ ಗಾಯವಾಗಿದ್ದು,  ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬ ಬೆಂಗಳೂರಿನಿಂದ‌ ಕಾರಿನಲ್ಲಿ ಕೃಷ್ಣಗಿರಿಗೆ ಹೊರಟಿತ್ತು. ಈ ವೇಳೆ ಬಸ್ ಓವರ್ ಟೇಕ್ ಮಾಡಲು ಹೋಗಿ ಕರು ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದವರ ಚೀರಾಡುವ ಶಬ್ದ ಕೇಳಿ ಸ್ಥಳೀಯರು ರಕ್ಷಿಸಿದ್ದಾರೆ.

ಸರ್ಕಾರಿ ಬಸ್ ಡಿಕ್ಕಿ, ಸವಾರರಿಬ್ಬರ ಸಾವು

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೋರೆಬಾಳ ಕ್ಯಾಂಪ್ನಲ್ಲಿ ಸರ್ಕಾರಿ ಬಸ್ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟ ಘಟನೆ ನಡೆದಿದೆ. ಬೈಕ್ ಸವಾರರಾದ ಮುಷ್ಟೂರಿನ ದುರುಗಪ್ಪ(40), ಈರಣ್ಣ(50) ಮೃತರು. ಆಯನೂರಿನಲ್ಲಿ ಮೊಹರಂ ಹಬ್ಬದಲ್ಲಿ ಪಾಲ್ಗೊಳ್ಳಲು ತೆರಳುವಾಗ ಘಟನೆ ನಡೆದಿದೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಬಸ್ ಡಿಕ್ಕಿಯಾಗಿ ಟ್ರ್ಯಾಕ್ಟರ್​ ಚಾಲಕ ದುರ್ಮರಣ

ಕೋಲಾರ: ಖಾಸಗಿ ಬಸ್ ಡಿಕ್ಕಿಯಾಗಿ ಟ್ರ್ಯಾಕ್ಟರ್​ ಚಾಲಕ ದುರ್ಮರಣ ಹೊಂದಿರುವಂತಹ ಘಟನೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಸಮೀಪ ನಡೆದಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸುವಾಗ ಟ್ರ್ಯಾಕ್ಟರ್​ ಚಾಲಕ ಜಮೀರ್ ಸಾವನ್ನಪ್ಪಿದ್ದಾನೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ರಾಷ್ಟ್ರೀಯ ಹೆದ್ದಾರಿ4 ಮಾದನಾಯಕನಹಳ್ಳಿ ಬಳಿ ನಡೆದಿದೆ. ನೆಲಮಂಗಲದ ಮಂಜುನಾಥ್(40)ಮೃತ ದುರ್ದೈವಿ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *