ಮಂಡ್ಯ: ಆಟೋ, ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ನಲ್ಲಿ ನಡೆದಿದೆ.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೆಂಕಟೇಶ್ (25), ಮುತ್ತಮ್ಮ (45), ಬಸಮ್ಮಣ್ಣಿ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಮಕ್ಕಳು ಮಳವಳ್ಳಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಕೂಡ ಮಳವಳ್ಳಿಯ ಧಡಧಪುರ ನಿವಾಸಿಗಲೂ ಎಂದು ಮಂಡ್ಯ ಎಸ್ಪಿ ಯತೀಶ್ ಮಾಹಿತಿ ನೀಡಿದ್ದಾರೆ. ಮದ್ದೂರು ಕಡೆಯಿಂದ ಹೋಗುತ್ತಿದ್ದ ಆಟೋ, ಮಳವಳ್ಳಿ ಕಡೆಯಿಂದ ಬರುತ್ತಿದ್ದ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಳವಳ್ಳಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.