ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರ್ಕಾರ ನಡೆಸುವುದು ಸಾಧ್ಯವಿಲ್ಲ ಮತ್ತು ವಿರೋಧ ಪಕ್ಷದ ಟೀಕೆ ಕೇಳಿಸಿಕೊಳ್ಳುವಷ್ಟು ಸೌಜನ್ಯತೆ ಇಲ್ಲ ಅಂತಾದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸರಣಿ ಹತ್ಯೆಗಳು ನಡೆಯುತ್ತಿರುವುದು ಸರ್ಕಾರದ ವೈಫಲ್ಯವಲ್ಲದೆ ಮತ್ತೇನೂ ಅಲ್ಲ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಮುಖ್ಯಮಂತ್ರಿಗಳು ಮಂಗಳೂರಲ್ಲಿರುವಾಗಲೇ ಅಲ್ಲಿ ಮತ್ತೊಂದು ಕೊಲೆ (murder) ನಡೆಯುತ್ತದೆ ಅಂದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಅಂತಲೇ ಆರ್ಥ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸರ್ಕಾರ ನಡೆಸುವುದು ಸಾಧ್ಯವಿಲ್ಲ ಮತ್ತು ವಿರೋಧ ಪಕ್ಷದ ಟೀಕೆ ಕೇಳಿಸಿಕೊಳ್ಳುವಷ್ಟು ಸೌಜನ್ಯತೆ ಇಲ್ಲ ಅಂತಾದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.