ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಪಬ್ಲಿಕ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಹೇಳಿಕೆಯಲ್ಲಿ ಏನಿದೆ?
ನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸಪ್ ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿರುವುದಾಗಿ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

The post ಆಡಿಯೋಗೂ, ನನಗೂ ಸಂಬಂಧವಿಲ್ಲ: ನಳಿನ್ ಕುಮಾರ್ ಕಟೀಲ್ appeared first on Public TV.

Source: publictv.in

Source link