ಆಡಿಯೋ ವೈರಲ್; ಮಂಗಳೂರು ಪೊಲೀಸ್ ಕಮಿಷನರ್​ಗೆ ಶಾಸಕರಿಂದ ದೂರು

ಆಡಿಯೋ ವೈರಲ್; ಮಂಗಳೂರು ಪೊಲೀಸ್ ಕಮಿಷನರ್​ಗೆ ಶಾಸಕರಿಂದ ದೂರು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮಂಗಳೂರು ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದಾರೆ.

ನಕಲಿ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಚಾರ ಕುರಿತು ತನಿಖೆ ನಡೆಸುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್​ಗೆ ಶಾಸಕರು ದೂರು ನೀಡಿದ್ದಾರೆ. ಮತ್ತು ವೈರಲ್ ಮಾಡಿದವರು ಮತ್ತು ನಕಲಿ ಆಡಿಯೋ ಸೃಷ್ಟಿಸಿದವರ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಈ ವೇಳೆ ಭಾಗಿಯಾಗಿದ್ದರು.

The post ಆಡಿಯೋ ವೈರಲ್; ಮಂಗಳೂರು ಪೊಲೀಸ್ ಕಮಿಷನರ್​ಗೆ ಶಾಸಕರಿಂದ ದೂರು appeared first on News First Kannada.

Source: newsfirstlive.com

Source link