ಆಣೆ ಮಾಡಲು ಹೇಳಕ್ಕೆ ನೀನು ಯಾರು? ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ | Ex cm HD Kumaraswamy questioned to Siddaramaiah in Hassan


ಆಣೆ ಮಾಡಲು ಹೇಳಕ್ಕೆ ನೀನು ಯಾರು? ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಹೆಚ್​ಡಿ ಕುಮಾರಸ್ವಾಮಿ

ಹಾಸನ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ನಡುವೆ ರಾಜಕೀಯ ಟ್ವೀಟ್ ಸಮರ, ವಾಕ್ಸಮರ ನಡೆಯುತ್ತಲೆ ಇರುತ್ತವೆ. ಇಂದು (ಏಪ್ರಿಲ್ 20) ಕುಮಾರಸ್ವಾಮಿ ಹಾಸನದಲ್ಲಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಆಣೆ ಮಾಡಿ. ಹೆಚ್ ಡಿ ದೇವೇಗೌಡರ ಮೇಲೆ ಆಣೆ ಮಾಡಲು ಸಿದ್ಧರಿದ್ದೀರಾ? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದ ಸಿದ್ದರಾಮಯ್ಯಗೆ, ಸುಳ್ಳಿನ ರಾಮಯ್ಯ ನಾನು ಕೇಳಿದ 4 ಪ್ರಶ್ನೆಗಳಿಗೆ ಉತ್ತರಿಸಲಿ. ಇಡೀ ದೇಶದಲ್ಲಿ ಜನರು ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಸ್ವಲ್ಪ ಉಸಿರಾಡುತ್ತಿದೆ. ಇವರು ಯಾವ ಕೋಮುವಾದ ನಿಲ್ಲಿಸುತ್ತಾರೆ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇವರ ಪಕ್ಷದವರೇ ಹೋಗಿ ಡಿ.ಜೆ.ಹಳ್ಳಿಯಲ್ಲಿ ಬೆಂಕಿ ಹಚ್ಚಿದ್ದರು. ಈಗ ಹುಬ್ಬಳ್ಳಿಯಲ್ಲೂ ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಇಂತಹವರು ದೇಶದಲ್ಲಿ ಜಾತ್ಯತೀತ ವಾದವನ್ನು ಉಳಿಸುತ್ತಾರಾ? ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.

ದೇವೇಗೌಡರ ಮೇಲೆ ಆಣೆ ಮಾಡುವುದಕ್ಕೆ ಹೇಳುತ್ತಾರೆ. ಇದನ್ನು ಹೇಳಲು ಸಿದ್ದರಾಮಯ್ಯ ನೀನು ಯಾವೂರು ದಾಸಯ್ಯ. ಸಿದ್ದರಾಮಯ್ಯ ಎಚ್ಚರಿಕೆಯಿಂದ ಮಾತನಾಡಬೇಕು. ಪದೇಪದೆ ಜೆಡಿಎಸ್ ಅನ್ನು ಬಿಜೆಪಿ ಬಿ ಟೀಂ ಎನ್ನುತ್ತೀರಿ. ರಾಜ್ಯದಲ್ಲಿ ಈಗ ಬಿಜೆಪಿ ಸರ್ಕಾರ ಬಂದಿದ್ದು ಯಾರಿಂದ. ಸಂಪುಟ ವಿಸ್ತರಣೆಯ ವೇಳೆ ಟವಲ್ ಕೊಡವಿ ಎದ್ದಿದ್ದರು. ಇಬ್ಬರು ಪಕ್ಷೇತರರನ್ನು ಮಾತ್ರಿ ಮಾಡಿಸಿ ಸರ್ಕಾರ ಕಿತ್ತರು. ಸಮ್ಮಿಶ್ರ ಸರ್ಕಾರ ಬೀಳುವುದಕ್ಕೆ ಇವರೇ ಮೂಲ ಕಾರಣ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

TV9 Kannada


Leave a Reply

Your email address will not be published.