ಚಾಮರಾಜನಗರ: ಆಮ್ಲಜನಕ ಕೊರತೆಯಿಂದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಹೈಕೋರ್ಟ್​​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಾಗಿದ್ದು, ಇಂದು ಹೈಕೋರ್ಟ್ ದ್ವಿಸದಸ್ಯ ಪೀಠದಿಂದ ಅದರ ವಿಚಾರಣೆ ನಡೆಯಲಿದೆ.

ಚಾಮರಾಜನಗರದ ವಕೀಲ ಕೆ.ಎಂ.ಶ್ರೀನಿವಾಸಮೂರ್ತಿ ಮೊಕದ್ದಮೆ ದಾಖಲಿಸಿದ್ದಾರೆ. ಮೃತ 24 ರೋಗಿಗಳ ಕುಟುಂಬಕ್ಕೆ ಪರಿಹಾರ ಹಾಗು ಸರ್ಕಾರಿ ಉದ್ಯೋಗ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳಿಗೆ ಕಾನೂನಿನ ಅನ್ವಯ ಶಿಕ್ಷೆ ಕೊಡಬೇಕು ಎಂದು ಶ್ರೀನಿವಾಸಮೂರ್ತಿ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ಸರ್ಕಾರ, ಆರೋಗ್ಯ ಇಲಾಖೆ ಆಯುಕ್ತರು, ಚಾಮರಾಜನಗರ ಜಿಲ್ಲಾಧಿಕಾರಿ, ಡಿಎಚ್ಓ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿ, ನಿನ್ನೆ ಆನ್​ಲೈನ್​ನಲ್ಲಿ ಪಿಐಎಲ್​ ಸಲ್ಲಿಸಿದ್ದಾರೆ. ಇಂದು  ಈ ಅರ್ಜಿಯ ವಿಚಾರಣೆಗೆ ಹೈಕೋರ್ಟ್​ ಸಮಯ ನಿಗದಿಪಡಿಸಿದೆ. ಮುಖ್ಯನ್ಯಾಯಮೂರ್ತಿ ಓಕಾ ಹಾಗು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠದ ಮುಂದೆ ಇಂದು ಮೊದಲ ಪ್ರಕರಣವಾಗಿ ಈ ಅರ್ಜಿ ವಿಚಾರಣೆಗೆ ಬರಲಿದೆ ಅಂತ ತಿಳಿದುಬಂದಿದೆ.

 

 

The post ಆಮ್ಲಜನಕ ಕೊರತೆ ದುರಂತದ ಬಗ್ಗೆ ವಕೀಲರಿಂದ PIL; ಇಂದು ಹೈಕೋರ್ಟ್​ನಲ್ಲಿ ವಿಚಾರಣೆ appeared first on News First Kannada.

Source: newsfirstlive.com

Source link