ಬೆಂಗಳೂರು: ಕೊರೊನಾ ಕಾರಣದಿಂದ ಆರ್ಥಿಕ ಎದುರಿಸುತ್ತಿದ್ದರೂ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಟ್ಟಿದ್ದು, ನೌಕರರಿಗೆ ಏಪ್ರಿಲ್​​ ಹಾಗೂ ಮೇ ತಿಂಗಳ ಸಂಬಳ ನೀಡಲು 325 ಕೋಟಿ ರೂಪಾಯಿ ಮಂಜೂರು ಮಾಡಿದೆ.

ಸಾರಿಗೆ ನಿಗಮಗಳು ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ನೌಕರರಿಗೆ ಸಂಬಳ ನೀಡಲು 975 ಕೋಟಿ ರೂಪಾಯಿ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದವು. ಸಾರಿಗೆ ನಿಗಮಗಳ ಮನವಿಯ ಮೇರೆಗೆ ಏಪ್ರಿಲ್ ಹಾಗೂ ಮೇ ತಿಂಗಳ ಸಂಬಳ ನೀಡಲು 325 ಕೋಟಿ ರೂಪಾಯಿಗಳನ್ನು ಸರ್ಕಾರ ಮಂಜೂರು ಮಾಡಿದೆ.

ರಾಜ್ಯದಲ್ಲಿ ನಡೆದ ಸಾರಿಗೆ ನೌಕರರ ಮುಷ್ಕರ ಹಾಗೂ ಆ ಬಳಿಕ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರ್ಫ್ಯೂ ಹಾಗೂ ಲಾಕ್​​ಡೌನ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದವು. ಇನ್ನು ದೇಶದಲ್ಲಿ ಕೊರೊನಾ ಆರಂಭವಾದ ಸಮಯದಿಂದಲೂ ಸಾರಿಗೆ ನಿಗಮಗಳು ನೌಕರರಿಗೆ ಸಂಬಳ ನೀಡಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದು, ಸರ್ಕಾರ ನೌಕರರಿಗೆ ಸಂಬಳ ನೀಡಲು ಕಾಲ ಕಾಲಕ್ಕೆ ಆರ್ಥಿಕ ನೆರವು ನೀಡುತ್ತಾ ಬಂದಿದೆ.

The post ಆರ್ಥಿಕ ಸಂಕಷ್ಟ ನಡುವೆಯೂ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ appeared first on News First Kannada.

Source: newsfirstlive.com

Source link