ಆರ್ಆರ್ಆರ್ ಸಿನಿಮಾ
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆರ್ಆರ್ಆರ್ ಸಿನಿಮಾದ ಟ್ರೇಲರ್ ಡಿಸೆಂಬರ್ 3ರಂದು ರಿಲೀಸ್ ಆಗಿ ಧೂಳೆಬ್ಬಿಸಬೇಕಿತ್ತು. ಆದರೆ, ಕಾರಣಾಂತರಗಳಿಂದ ಟ್ರೇಲರ್ ರಿಲೀಸ್ ಆಗಿಲ್ಲ. ದೇಶದಲ್ಲಿ ಕೊವಿಡ್ ಪ್ರಕರಣ ನಿಧಾನವಾಗಿ ಹೆಚ್ಚುತ್ತಿದೆ. ಈ ಕಾರಣಕ್ಕೆ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲು ಚಿತ್ರತಂಡ ನಿರ್ಧರಿಸಿದ್ದು, ಹೀಗಾಗಿ ಟ್ರೇಲರ್ ರಿಲೀಸ್ ಮಾಡಿಲ್ಲ ಎನ್ನುವ ಮಾತು ಹರಿದಾಡಿತ್ತು. ಆದರೆ, ಈಗ ಚಿತ್ರತಂಡ ಇದಕ್ಕೆ ಸ್ಪಷ್ಟನೆ ನೀಡುವ ಕೆಲಸ ಮಾಡಿದೆ. ಡಿಸೆಂಬರ್ 9ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗುತ್ತಿದೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.
ಟ್ರೇಲರ್ಗಾಗಿ ಅಭಿಮಾನಿಗಳು ಕಾತರದಿಂದ ಕಾದಿದ್ದರು. ಆದರೆ ಟ್ರೇಲರ್ ಬಿಡುಗಡೆ ಮುಂದೂಡಲಾಗಿರುವ ವಿಚಾರವನ್ನು ‘ಆರ್ಆರ್ಆರ್’ ಚಿತ್ರದ ಅಧಿಕೃತ ಟ್ವಿಟರ್ ಖಾತೆ ಮೂಲಕವೇ ತಿಳಿಸಲಾಗಿತ್ತು. ಈ ನಿರ್ಧಾರಕ್ಕೆ ಸೂಕ್ತ ಕಾರಣ ಏನು ಎಂಬುದನ್ನು ಚಿತ್ರತಂಡ ತಿಳಿಸಿರಲಿಲ್ಲ. ‘ಅನಿರೀಕ್ಷಿತ ಕಾರಣಗಳಿಂದಾಗಿ ನಾವು ಡಿ.3ರಂದು ಆರ್ಆರ್ಆರ್ ಟ್ರೇಲರ್ ಬಿಡುಗಡೆ ಮಾಡುತ್ತಿಲ್ಲ. ಹೊಸ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿತ್ತು. ಅಂತೆಯೇ, ಡಿಸೆಂಬರ್ 9ರಂದು ಟ್ರೇಲರ್ ರಿಲೀಸ್ ಆಗುತ್ತಿದೆ.
ಜನವರಿ 7ರಂದು ‘ಆರ್ಆರ್ಆರ್’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವಿದೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಹಲವು ಹಾಡುಗಳನ್ನು ರಿಲೀಸ್ ಮಾಡುವ ಮೂಲಕ ಚಿತ್ರದ ಮೇಲೆ ಭರವಸೆ ಹುಟ್ಟಿಸುವ ಕೆಲಸ ನಡೆದಿದೆ. ಈಗ ಡಿಸೆಂಬರ್ 9ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗುತ್ತಿದ್ದು, ಸಿನಿಪ್ರಿಯರ ಕಾತುರ ಹೆಚ್ಚಿದೆ.
DECEMBER 9th… #RRRTrailer… #RRRTrailerOnDec9th #RRRMovie pic.twitter.com/aTivcMbA02
— rajamouli ss (@ssrajamouli) December 4, 2021
ರಾಜಮೌಳಿ ಸಿನಿಮಾ ಬಜೆಟ್ಗೆ ತಕ್ಕಂತೆ ಅದ್ದೂರಿಯಾಗಿ ಮೂಡಿ ಬರುತ್ತದೆ. ‘ಆರ್ಆರ್ಆರ್’ ಸಿನಿಮಾ ಮೇಕಿಂಗ್ ಕೂಡ ಉತ್ಕೃಷ್ಟ ಮಟ್ಟದಿಂದ ಕೂಡಿರಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಚಿತ್ರತಂಡ ಪ್ರಚಾರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಿದೆ. ಟ್ರೇಲರ್ ರಿಲೀಸ್ ಆದ ಒಂದು ತಿಂಗಳವರೆಗೆ ನಾನಾ ರಾಜ್ಯಗಳಿಗೆ ತೆರಳಿ ತಂಡ ಸಿನಿಮಾ ಪ್ರಚಾರ ಕಾರ್ಯ ನಡೆಸಿಲಿದೆ.
ಕರ್ನಾಟಕದಲ್ಲಿ ಗ್ರ್ಯಾಂಡ್ ಆಗಿ ಪ್ರೀ-ರಿಲೀಸ್ ಇವೆಂಟ್ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ರಾಜಮೌಳಿ ಇತ್ತೀಚೆಗೆ ಮಾಹಿತಿ ನೀಡಿದ್ದರು. ಈ ಕಾರ್ಯ ಯಾವಾಗ ನಡೆಯಲಿದೆ ಎನ್ನುವ ಕುತೂಹಲ ಕನ್ನಡಿಗರಲ್ಲಿ ಮೂಡಿದೆ. ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂನಲ್ಲಿ ಸಿನಿಮಾ ಮೂಡಿ ಬರುತ್ತಿದೆ.