ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ‌ ನೀಡಿದ್ದ ಹಿರಿಯ ನಾಯಕ ಬಿ.ಜನಾರ್ಧನ ಪೂಜಾರಿ ಅವರು, ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಆರೋಗ್ಯವಾಗಿ ಬರುತ್ತಾರೆ, ದೇವರು ಅವರಿಗೆ ಸಹಾಯ ಮಾಡುತ್ತಾರೆ. ಅವರು ಆರೋಗ್ಯವಾಗಿ ಬರುತ್ತಾರೆ, ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಗದ್ಗದಿತರಾಗಿ ಕಣ್ಣೀರಿಟ್ಟರು.

ಅನಾರೋಗ್ಯದಿಂದ ಬಳಲುತ್ತಿರುವ ಆಸ್ಕರ್ ಫರ್ನಾಂಡಿಸ್ ಅವರನ್ನು ಕೆಲವು ದಿನಗಳ ಹಿಂದೆ ನಗರದ ಯೆನೆಪೊಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳ ಹಿಂದೆ ಆಸ್ಕರ್ ಫರ್ನಾಂಡಿಸ್ ಅವರು ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ಆಸ್ಕರ್ ಫರ್ನಾಂಡಿಸ್ ಕೇಂದ್ರದ ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು. ಇಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದರು.

The post ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು -ಬಿಕ್ಕಿ ಬಿಕ್ಕಿ ಅತ್ತ ಜನಾರ್ಧನ ಪೂಜಾರಿ appeared first on News First Kannada.

Source: newsfirstlive.com

Source link