ಬಳ್ಳಾರಿ: ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ರೋಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ.
ರೈತ ತಿಕ್ಕಪ್ಪ ಅನ್ನೋರಿಗೆ ನಿನ್ನೆ ರಾತ್ರಿ ಹೃದಯಾಘಾತ ಸಂಭವಿಸಿತ್ತು. ಕೂಡಲೇ ಮನೆಯವರು ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಯಾರೂ ಇರಲಿಲ್ಲ. ಪರಿಣಾಮ ರೈತ ಮೃತಪಟ್ಟಿದ್ದಾನೆ ಅನ್ನೋ ಆರೋಪ ಕೇಳಿಬಂದಿದೆ.
ಇನ್ನು ರೋಗಿಯ ಸಾವಿನ ನಂತರ ವೈದ್ಯರು ಬಂದು ತಪಾಸಣೆ ಮಾಡಿದ್ದಾರೆ. ಅಷ್ಟರೊಳಗೆ ಪರಿಸ್ಥಿತಿ ಕೈಮೀರಿ ಹೋಗಿತ್ತು ಎನ್ನಲಾಗಿದೆ. ಪ್ರಾಥಮಿಕ ಚಿಕಿತ್ಸೆ ಸಿಗದಿರುವುದಕ್ಕೆ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
The post ಆಸ್ಪತ್ರೆಗೆ ಬೀಗ ಜಡಿದು ಸಿಬ್ಬಂದಿ ನಾಪತ್ತೆ; ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಗೆ ಚಿಕಿತ್ಸೆ ಸಿಗದೇ ಸಾವು appeared first on News First Kannada.