ಆಸ್ಪತ್ರೆಯಲ್ಲಿ ಘನಘೋರ ಬೆಂಕಿ ದುರಂತ; ನಾಲ್ವರು ಮಕ್ಕಳು ಸಾವು


ನವದೆಹಲಿ: ಮಧ್ಯಪ್ರದೇಶದ ಸರ್ಕಾರಿ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ.

ಅಗ್ನಿ ಅವಘಡ ಸಂಭವಿಸಿದಾಗ ಆಸ್ಪತ್ರೆಯಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಲ್ಕು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ ಅಂತ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅಲ್ಲಿನ ಶಿಕ್ಷಣ ಸಚಿವ ವಿಶ್ವಾಸ್​, ಬೆಂಕಿಬಿದ್ದ ವಾರ್ಡ್​​ನಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ 4 ಮಕ್ಕಳನ್ನ ರಕ್ಷಣೆ ಮಾಡಲು ಆಗಲಿಲ್ಲ. ಮೃತ ಮಕ್ಕಳ ಪೋಷಕರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಪ್ರಕರಣದ ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *