ಬೆಂಗಳೂರು: ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ಸಾರಿಗೆ ಸೇವೆ, ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಈ ಬಗ್ಗೆ  ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ.

  •  ಸಹಾಯವಾಣಿಯ ನಂಬರ್ 9449863214
  • ವಿಳಾಸ: ಸಾರಿಗೆ ಆಯುಕ್ತರ ಕಛೇರಿ, 1ನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಶಾಂತಿನಗರ, ಬೆಂಗಳೂರು- 27.

ಸಾರಿಗೆ ಸೇವೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಅಥವಾ ಕುಂದುಕೊರತೆಗಳಿದ್ದಲ್ಲಿ ಸಾರ್ವಜನಿಕರು ಈ ಸಹಾಯವಾಣಿಯನ್ನು ಸಂಪರ್ಕಿಸಿ ಉಪಯೋಗ ಪಡೆದುಕೊಳ್ಳಬಹುದು ಎಂದು ಸವದಿ ತಿಳಿಸಿದ್ದಾರೆ.

ಕೋವಿಡ್ ರೋಗದಿಂದ ತೊಂದರೆಗೆ ಒಳಗಾಗಿರುವ ಸೋಂಕಿತರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂಬುಲೆನ್ಸ್ ಸೇವೆಗೂ ಸರ್ಕಾರ ಸೂಕ್ತ ದರವನ್ನು ನಿಗದಿಪಡಿಸಿದ್ದು, ಆ ಪ್ರಕಾರವೇ ಅಂಬುಲೆನ್ಸ್ ಸೇವೆಗೆ ಅಂಬುಲೆನ್ಸ್ ವಾಹನಗಳ ಮಾಲೀಕರು ದರ ವಿಧಿಸಬೇಕಾಗಿದೆ. ಆದರೆ ಕೆಲವು ಪ್ರಕರಣಗಳಲ್ಲಿ ಅಂಬುಲೆನ್ಸ್ ಸೇವೆಗೆ ಸಾರ್ವಜನಿಕರಿಂದ ಅಧಿಕ ಶುಲ್ಕ ಸಂಗ್ರಹಿಸುತ್ತಿರುವ ಆರೋಪಗಳು ವ್ಯಕ್ತವಾಗಿವೆ. ಇದು ಸರಿಯಲ್ಲ. ಒಂದು ವೇಳೆ ಸರ್ಕಾರದ ನಿಗದಿಪಡಿಸಿರುವ ದರಕ್ಕಿಂತಲೂ ಹೆಚ್ಚು ಹಣವನ್ನು ಯಾರೇ ಸಂಗ್ರಹಿಸಿ ನಿಯಮ ಉಲ್ಲಂಘಿಸಿದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸವದಿ ಎಚ್ಚರಿಕೆ ನೀಡಿದ್ದಾರೆ.

 

 

The post ಆ್ಯಂಬುಲೆನ್ಸ್, ಪರಿಹಾರ.. ಸಾರಿಗೆ ಸೇವೆ ಸಂಬಂಧ ಏನೇ ಸಮಸ್ಯೆಯಿದ್ರೂ ಈ ನಂಬರ್​​ಗೆ ಕರೆ ಮಾಡಿ appeared first on News First Kannada.

Source: newsfirstlive.com

Source link