ಕಿವೀಸ್ ಪಡೆಯ ನಾಯಕ ಕೇನ್ ವಿಲಿಯಮ್ಸನ್ ಇಂಜುರಿಗೆ ಒಳಗಾಗಿದ್ದು, ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​​ ಆರಂಭಕ್ಕೂ ಮುನ್ನವೇ ನ್ಯೂಜಿಲೆಂಡ್​​ಗೆ ಹಿನ್ನಡೆ ಉಂಟಾಗಿದೆ.

ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಕೇನ್ ವಿಲಿಯಮ್ಸನ್ ಮೊಣಕೈಗೆ ಗಾಯ ಮಾಡಿಕೊಂಡಿದ್ದು, ವೈದ್ಯರ ಸೂಚನೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನೂ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್​ನಿಂದ ಹೊರಗುಳಿರುವ ಕೇನ್ ವಿಲಿಯಮ್ಸನ್, ಬದಲಿಗೆ ಉಪ ನಾಯಕ ಟಾಮ್ ಲಾಥಮ್ ತಂಡವನ್ನ ಮುನ್ನಡೆಸುತ್ತಿದ್ದಾರೆ.

ಆಲ್​​ರೌಂಡರ್ ಮಿಚೆಲ್ ಸ್ಯಾಂಟ್ನರ್ ಕೂಡ ಕೈ ಬೆರಳಿಗೆ ಗಾಯ ಮಾಡಿಕೊಂಡು ತಂಡದಿಂದ ಹೊರ ಬಿದ್ದಿದ್ದಾರೆ. ಇನ್ನೂ ಜೂನ್ 18ರಂದು ಆರಂಭವಾಗಲಿರುವ ಬಹು ನಿರೀಕ್ಷಿತ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್​​ಗೆ ಕೇವಲ 7 ದಿನ ಬಾಕಿ ಉಳಿದಿದ್ದು, ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ವಿಲಿಯಮ್ಸನ್ ಆಡುವುದೂ ಕೂಡ ಅನುಮಾನವಾಗಿದೆ.

The post ಇಂಗ್ಲೆಂಡ್ V/S ನ್ಯೂಜಿಲೆಂಡ್ 2ನೇ ಟೆಸ್ಟ್​- ಪಂದ್ಯದಿಂದ ಕೇನ್ ವಿಲಿಯಮ್ಸನ್ ಔಟ್ appeared first on News First Kannada.

Source: newsfirstlive.com

Source link