
ಕೋಟ ಶ್ರೀನಿವಾಸ ಪೂಜಾರಿ
ಇಂದಲ್ಲ ನಾಳೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಬಿಜೆಪಿ ಜಾರಿಗೆ ತರುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕೊಪ್ಪಳ: ಇಂದಲ್ಲ ನಾಳೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಕಾನೂನು ಜಾರಿಗೆ ಬರುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Shrinivas Poojary) ಹೇಳಿಕೆ ನೀಡಿದ್ದಾರೆ. ಕೊಪ್ಪಳದ ಕುಕನೂರಿನಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಣಿಯಲ್ಲಿ ಏಕರೂಪ ನಾಗರಿಕ ಕಾನೂನು ಜಾರಿ ಬಗ್ಗೆ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಇಂದಲ್ಲ ನಾಳೆ ಸಮಾನ ನಾಗರಿಕತೆ ತಂದೇ ತರುತ್ತದೆ. ಬಿಜೆಪಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಜಾರಿಗೆ ಬಂದ ನಂತರ ಜಮ್ಮು ಕಾಶ್ಮೀರದಲ್ಲಿದ್ದ ಆರ್ಟಿಕಲ್ 370 (Art 370) ರದ್ದುಗೊಳಿಸಲಾಯಿತು. ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ಆಗಿರುವುದನ್ನು ಎಲ್ಲರೂ ನೋಡಿದ್ದಾರೆ. ಸದ್ಯ ಮಂದಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈವರೆಗೆ ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಬಿಜೆಪಿ ಏನು ಹೇಳಿದೆ ಅದನ್ನೇ ಮಾಡಿದೆ. ಮುಂದೆ ಏಕರೂಪದ ನಾಗರಿಕ ಕಾನೂನು ಜಾರಿಗೆ ತರುತ್ತದೆ ಎಂದರು.