ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮೆಟ್ರೋ ಸಂಚಾರ ಆರಂಭವಾಗಿದೆ. ಮೆಟ್ರೋ ಕಾರ್ಡ್ ಬಳಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ಆದ್ರೆ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ ಮತ್ತು ಭಾನುವಾರದಂದು ಮಾತ್ರ ಮೆಟ್ರೋ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಜನ ದಟ್ಟಣೆ ಇರುವ ಸಂದರ್ಭದಲ್ಲಿ 5 ‌ನಿಮಿಷಕ್ಕೊಂದರಂತೆ ಹಾಗೂ ಜನದಟ್ಟಣೆ ಇಲ್ಲದ ವೇಳೆ 15 ನಿಮಿಷಕ್ಕೊಂದರಂತೆ ಮೆಟ್ರೋ ಓಡಾಡಲಿದೆ.

The post ಇಂದಿನಿಂದ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮೆಟ್ರೋ ಸಂಚಾರ appeared first on News First Kannada.

Source: newsfirstlive.com

Source link