ರಾಯಚೂರು: ಮಹಾಮಾರಿ ಕೊರೊನಾ ವೈರಸ್ 2ನೇ ಅಲೆ ಹಿನ್ನೆಲೆಯಲ್ಲಿ ಕ್ಲೋಸ್ ಆಗಿದ್ದ ಮಂತ್ರಾಲಯ ಇಂದಿನಿಂದ ತೆರೆಯುತ್ತಿದ್ದು, ರಾಯರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಶ್ರೀ ರಾಘವೇಂದ್ರ ಸ್ವಾಮೀಜಿಗಳ ಬೃಂದಾವನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದರ್ಶನಕ್ಕೆ ಸಮಯ ನಿಗದಿ ಮಾಡಿದ ಶ್ರೀಮಠ, ನಿತ್ಯ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ರಾಯರ ದರ್ಶನಕ್ಕೆ ಅನುಮತಿ ನೀಡಿದೆ.

ಕೋವಿಡ್ ನಿಯಮದಂತೆ ದರ್ಶನಕ್ಕೆ ಅವಕಾಶ ನೀಡಿದ ಶ್ರೀ ಮಠ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ರಾಯರ ಭಕ್ತರಿಗೆ ಮುಕ್ತ ಅವಕಾಶ ನೀಡಲು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ಆದೇಶ ನೀಡಿದ್ದು, ಅದರಂತೆ ಮಠದ ಆಡಳಿತ ಮಂಡಳಿ ನಿರ್ಧರಿಸಿತ್ತು. ಕೋವಿಡ್ ನಿಯಮಗಳಿಗೆ ಒಳಪಟ್ಟು ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಭಕ್ತಾದಿಗಳು ಸಹ ಮಾಸ್ಕ್, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂತ್ರಾಲಯ ಮಠದ ವ್ಯವಸ್ಥಾಪಕ ವೆಂಕಟೇಶ ಜೋಷಿ ಹೇಳಿದ್ದರು ಮೂರು ದಿನಗಳ ಹಿಂದೆ ತಿಳಿಸಿದ್ದರು.

The post ಇಂದಿನಿಂದ ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಅವಕಾಶ appeared first on Public TV.

Source: publictv.in

Source link