ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್ ಅಳವಡಿಕೆ | Karnataka Common entrance exam CET Starts from today for 3 days


ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್ ಅಳವಡಿಕೆ

(ಪ್ರಾತಿನಿಧಿಕ ಚಿತ್ರ)

ಮೂರು ದಿನಗಳ ಕಾಲ ನಡೆಯಲಿರುವ ಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ. ಅದ್ರಲ್ಲೂ, ಧರ್ಮ ಸಂಘರ್ಷದ ಹೊತ್ತಲ್ಲಿ ವಿಶೇಷ ನಿಗಾ ವಹಿಸಿದೆ. ಧರ್ಮಸೂಚಕ ಸಮವಸ್ತ್ರ ಧರಿಸಿ ಬಂದವ್ರಿಗೆ ಅವಕಾಶ ಇರೋದಿಲ್ಲ.

ಬೆಂಗಳೂರು: ಇಂದಿನಿಂದ(ಜೂನ್ 16) ವೃತ್ತಿಪರ ಕೋರ್ಸ್ ಗಳ ಸಿಇಟಿ(CET) ಪರೀಕ್ಷೆ ಆರಂಭವಾಗ್ತಿದೆ, 3 ದಿನಗಳ ಕಾಲ 5 ಸಬ್ಜೆಕ್ಟ್ ಗಳ ಎಕ್ಸಾಂ ನಡೆಯಲಿದೆ. ಕೆಇಎ ಬೋರ್ಡ್ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ನೀಟ್(NEET) ಮಾದರಿಯಲ್ಲಿ ಎಕ್ಸಾಂ ನಡೆಯಲಿದ್ದು ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಹಿಜಾಬ್(Hijab)​ ಧರಿಸಿಬರುವವರಿಗೆ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫುಲ್ ಅಲರ್ಟ್
ಇತ್ತೀಚಿಗೆ ನಡೆದ PSI ಹಾಗೂ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗಳ ಅಕ್ರಮದಿಂದ ಎಚ್ಚೆತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫುಲ್ ಅಲರ್ಟ್ ಆಗಿದೆ. ಈ ಬಾರಿಯ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಯನ್ನ ಟೈಟ್ ಸೆಕ್ಯೂರಿಟಿಯಲ್ಲಿ ನಡೆಸಲು ಸಜ್ಜಾಗಿದೆ. ಇಂದಿನಿಂದ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಗಳು ಆರಂಭವಾಗಲಿದ್ದು ಜೂ.18ರವರೆಗೂ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುತ್ತೆ. 3 ದಿನಗಳ ಕಾಲ 5 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ವಿಶೇಷ ಅಂದ್ರೆ ಈ ಬಾರಿ ಸಿಇಟಿಯಲ್ಲಿ ಪ್ರಶ್ನೆ ಮತ್ತು ಉತ್ತರಗಳು ಇಂಗ್ಲಿಷ್ ಹಾಗೂ ಕನ್ನಡ ಎರಡೂ ಭಾಷೆಯಲ್ಲೂ ಇರಲಿದೆ. ಪ್ರತಿಯೊಂದು ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬರನ್ನು ಪರೀಕ್ಷಾ ವೀಕ್ಷಕರಾಗಿ ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟು 2,16,525 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

TV9 Kannada


Leave a Reply

Your email address will not be published.